ವಿದೇಶ

ಹವಾಮಾನ ಬದಲಾವಣೆ ವಿರುದ್ಧದ ಹೋರಾಟಕ್ಕೆ ಶ್ರೀಮಂತ ರಾಷ್ಟ್ರಗಳು ಕೈಜೋಡಿಸಬೇಕು: ಮೋದಿ

ಅಭಿವೃದ್ಧಿ ಹೊಂದಿದ್ದ ರಾಷ್ಟ್ರಗಳು ತಮ್ಮ ಅಭ್ಯುದಯಕ್ಕಾಗಿ ಸಾಂಪ್ರದಾಯಿಕ ಇಂಧನ ಮೂಲಗಳನ್ನು ಬಳಸಿಕೊಂಡು, ಹೊರಸೂಸುವಿಕೆ ಹೊರೆಯನ್ನು ತಗ್ಗಿಸುವ...

ಹವಾಮಾನ ಬದಲಾವಣೆ ವಿರುದ್ಧದ ಹೋರಾಟಕ್ಕೆ ಶ್ರೀಮಂತ ರಾಷ್ಟ್ರಗಳು ಕೈಜೋಡಿಸಬೇಕು: ಮೋದಿ
ನರೇಂದ್ರ ಮೋದಿ
Published On :

ಪಾರಿಸ್: ಅಭಿವೃದ್ಧಿ ಹೊಂದಿದ್ದ ರಾಷ್ಟ್ರಗಳು ತಮ್ಮ ಅಭ್ಯುದಯಕ್ಕಾಗಿ ಸಾಂಪ್ರದಾಯಿಕ ಇಂಧನ ಮೂಲಗಳನ್ನು ಬಳಸಿಕೊಂಡು, ಹೊರಸೂಸುವಿಕೆ ಹೊರೆಯನ್ನು ತಗ್ಗಿಸುವ ಹೊಣೆ ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ಹಾಕುವುದು 'ನೈತಿಕವಾಗಿ ತಪ್ಪು' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಇಂದು ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಹವಾಮಾನ ಬದಲಾವಣೆ ಶೃಂಗ ಸಭೆಯಲ್ಲಿ ಭಾಗವಹಿಸಿರುವ ಮೋದಿ ಅವರು, ಈ ವಿಚಾರದಲ್ಲಿ ಸಾಮೂಹಿಕ ಹೊಣೆಗಾರಿಕೆ ತತ್ವ ಅನುಸರಿಸಬೇಕು. ಇಲ್ಲದಿದ್ದರೆ ಅದು ನೈತಿಕವಾಗಿ ತಪ್ಪಾಗುತ್ತದೆ ಎಂದು ಫೈನಾನ್ಶಿಯಲ್ ಟೈಮ್ಸ್‌ನ ಅಭಿಪ್ರಾಯ ವಿಭಾಗದಲ್ಲಿ ಬರೆದಿದ್ದಾರೆ.

ಅಭಿವೃದ್ಧಿ ಹೊಂದಿದ ದೇಶಗಳು ಹವಾಮಾನ ಬದಲಾವಣೆ ವಿರುದ್ಧದ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಪ್ರಧಾನಿ ಮನವಿ ಮಾಡಿದ್ದಾರೆ.

ಶ್ರೀಮಂತ ರಾಷ್ಟ್ರಗಳು ಮನುಷ್ಯನ ಮೇಲಾಗುವ ಪರಿಣಾಮಗಳನ್ನು ಮರೆತು ಅಭಿವೃದ್ಧಿ ಚಟುವಟಿಕೆಯಲ್ಲಿ ತೊಡಗಿವೆ. ಇದರಿಂದ ಜಾಗತಿಕ ತಾಪಮಾನ ಹೆಚ್ಚುತ್ತಿದೆ ಎಂದು ಮೋದಿ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹವಾಮಾನ ಬದಲಾವಣೆ ಅಥವಾ ಜಾಗತಿಕ ತಾಪಮಾನ ಏರಿಕೆ ಕುರಿತ ವಿಶ್ವಸಂಸ್ಥೆಯ 21ನೇ ಶೃಂಗಸಭೆ ಇಂದಿನ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ಆರಂಭವಾಗಿದ್ದು, 12 ದಿನಗಳ ಕಾಲ ನಡೆಯುವ ಈ ಶೃಂಗದಲ್ಲಿ 150 ರಾಷ್ಟ್ರಗಳ ನಾಯಕರು ಭಾಗವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.