ಪ್ಯಾರಿಸ್‌ನಲ್ಲಿ ಮೋದಿ-ಷರೀಫ್ ಭೇಟಿ, ಬದಲಾಗುತ್ತಾ ಭಾರತ-ಪಾಕ್ ಹವಾಮಾನ?
ಇಂದಿನಿಂದ ಆರಂಭವಾಗಿರುವ ಹವಾಮಾನ ಬದಲಾವಣೆ ಅಥವಾ ಜಾಗತಿಕ ತಾಪಮಾನ ಏರಿಕೆ ಕುರಿತ ವಿಶ್ವಸಂಸ್ಥೆಯ 21ನೇ...

ಪ್ಯಾರಿಸ್: ಇಂದಿನಿಂದ ಆರಂಭವಾಗಿರುವ ಹವಾಮಾನ ಬದಲಾವಣೆ ಅಥವಾ ಜಾಗತಿಕ ತಾಪಮಾನ ಏರಿಕೆ ಕುರಿತ ವಿಶ್ವಸಂಸ್ಥೆಯ 21ನೇ ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರು ಸೋಮವಾರ ಪರಸ್ಪರ ಭೇಟಿಯಾಗಿ ಚರ್ಚೆ ನಡೆಸಿದರು.
ಭಾರತ-ಪಾಕ್ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವ ಸಂದರ್ಭದಲ್ಲೇ ಪ್ರಧಾನಿ ಮೋದಿ ಅವರು ಪ್ಯಾರಿಸ್‌ನಲ್ಲಿ ಪಾಕ್ ಪ್ರಧಾನಿಯ ಹಸ್ತಲಾಘವ ಮಾಡಿ, ಒಂದೇ ಸೋಫಾದಲ್ಲಿ ಕುಳಿತು ಚರ್ಚಿಸುತ್ತಿರುವ ದೃಶ್ಯಗಳು ಮಾಧ್ಯಮಕ್ಕೆ ಲಭ್ಯವಾಗಿವೆ. ಆದರೆ ಉಭಯ ನಾಯಕರ ಮಾತುಕತೆಯ ವಿವರ ಇನ್ನೂ ಲಭ್ಯವಾಗಿಲ್ಲ.
ಪ್ಯಾರಿಸ್‌ನಲ್ಲಿ ಮೋದಿ ಹಾಗೂ ನವಾಜ್ ಷರೀಫ್ ಅವರ ಅಧಿಕೃತ ಮಾತುಕತೆ ಇದುವರೆಗೂ ನಿಗದಿಯಾಗಿಲ್ಲ. ಆದರೆ ಇತ್ತೀಚಿಗಷ್ಟೇ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು ಭಾರತದೊಂದಿಗೆ ಬೇಷರತ್ ಮಾತುಕತೆಗೆ ಸಿದ್ಧ ಎಂದು ಹೇಳಿರುವುದರಿಂದ ದ್ವಿಪಕ್ಷೀಯ ಮಾತುಕತೆ ತಳ್ಳಿಹಾಕುವಂತಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


