ಪಾಕಿಸ್ತಾನದ ನೆಲದಲ್ಲಿ ಭಯೋತ್ಪಾದನೆಗೆ ಅವಕಾಶ ನೀಡುವುದಿಲ್ಲ: ನವಾಜ್ ಶರೀಫ್
ಬ್ರಿಟಿಶ್ ಪ್ರಧಾನಿ ಡೇವಿಡ್ ಕ್ಯಾಮರಾನ್ ಮತ್ತು ಅಪ್ಘಾನಿಸ್ಥಾನ ಅಧ್ಯಕ್ಷ ಅಶ್ರಫ್ ಘನಿ ಅವರೊಂದಿಗೆ ಸಭೆ ನಡೆಸಿದ ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್, ಭಯೋತ್ಪಾದಕ ಚಟುವಟಿಕೆಗಳಿಗೆ

ಕರಾಚಿ: ಬ್ರಿಟಿಶ್ ಪ್ರಧಾನಿ ಡೇವಿಡ್ ಕ್ಯಾಮರಾನ್ ಮತ್ತು ಅಪ್ಘಾನಿಸ್ಥಾನ ಅಧ್ಯಕ್ಷ ಅಶ್ರಫ್ ಘನಿ ಅವರೊಂದಿಗೆ ಸಭೆ ನಡೆಸಿದ ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್, ಭಯೋತ್ಪಾದಕ ಚಟುವಟಿಕೆಗಳಿಗೆ ಬಳಕೆಯಾಗಲು ಪಾಕಿಸ್ತಾನ ನೆಲದಲ್ಲಿ ಅವಕಾಶ ನೀಡುವುದಿಲ್ಲ ಎಂದು ಮತ್ತೆ ಹೇಳಿದ್ದಾರೆ.
ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಹವಾಮಾನ ಬದಲಾವಣೆ ಸಮಾವೇಶದ (ಸಿಒಪಿ೨೧) ಜೊತೆಗೆ ಈ ನಾಯಕರು ಸಭೆ ನಡೆಸಿದರು.
ಕಳೆದ ಎರಡು ವರ್ಷಗಳಿಂದ ಭಯೋತ್ಪಾದಕರ ವಿರುದ್ಧ ನಡೆಸಿರುವ ಜರ್ಬ್-ಇ-ಅಜಬ್ ಸೇನಾ ಕಾರ್ಯಾಚರಣೆಗಾಗಿ ಇಬ್ಬರೂ ನಾಯಕರನ್ನು ಶರೀಫ್ ಅಭಿನಂದಿಸಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
ಅಪ್ಘಾನಿಸ್ಥಾನದಲ್ಲಿ ಶಾಂತಿ ಮತ್ತು ಸ್ಥಿರತೆ ಮೂಡಿಸಲು ಅಧ್ಯಕ್ಷ ಘನಿ ಜೊತೆ ಕೆಲಸ ಮಾಡುವುದಾಗಿ ಶರೀಫ್ ತಿಳಿಸಿದ್ದಾರೆ. ಇದಕ್ಕೆ ದನಿಗೂಡಿಸಿದ ಘನಿ ಅವರು ಪಾಕಿಸ್ತಾನದ ಜೊತೆಗೆ ಉತ್ತಮ ಬಾಂಧವ್ಯ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಸಹಕಾರಕ್ಕೆ ಶ್ರಮಿಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


