ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಬಚಾವಾದ ಫುಟ್ ಬಾಲ್ ಆಟಗಾರ ರೊನಾಲ್ಡಿನೊ
ಎರಡು ಬಾರಿ ವರ್ಷದ ವಿಶ್ವ ಫುಟ್ಬಾಲ್ ಆಟಗಾರ ಪ್ರಶಸ್ತಿ ಪಡೆದಿದ್ದ ರೊನಾಲ್ಡಿನೊ ಕಾರು ಅಪಘಾತದಲ್ಲಿ ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದಾರೆ.

ಬ್ರೆಜಿಲ್: ಎರಡು ಬಾರಿ ವರ್ಷದ ಫೀಫಾ ವಿಶ್ವ ಫುಟ್ಬಾಲ್ ಆಟಗಾರ ಪ್ರಶಸ್ತಿ ಪಡೆದಿದ್ದ ಬ್ರೆಜಿಲ್ ನ ರೊನಾಲ್ಡಿನೊ ಕಾರು ಅಪಘಾತದಲ್ಲಿ ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದಾರೆ.
ತಾಯಿಯ ಜನ್ಮದಿನವನ್ನು ಆಚರಿಸಲು ಪೊರ್ಟೊ ಅಲೆಗ್ರೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು ಗಾಯಗಳಾಗದೇ ರೆನಾಲ್ಡಿನೋ ಸುರಕ್ಷಿತವಾಗಿದ್ದಾರೆ. ಕಾರು ಅಪಘಾತದಲ್ಲಿ ಕಾರುಚಾಲಕ ರೆನಾಲ್ಡಿನೋ, ರೆನಾಲ್ಡಿನೋ ಸಹೋದರ ಇದ್ದರು. ಆಳವಿಲ್ಲದ ರಸ್ತೆಬದಿಯ ಕಂದಕಕ್ಕೆ ಜಾರಿದ್ದರಿಂದ ಅಪಘಾತ ಸಂಭವಿಸಿದೆ. ಅಪಘಾತದ ಫೋಟೊಗಳನ್ನು ಸಾಮಾಜಿಕ ತಾಣದಲ್ಲಿ ಪ್ರಕಟಿಸಲಾಗಿದೆ.
ಗಂಭೀರ ಅಪಘಾತವೇನು ಸಂಭವಿಸಿಲ್ಲ, ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ರೆನಾಲ್ಡಿನೋ ಹೇಳಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


