ಭಾರತದೊಂದಿಗಿನ ರಾಜತಾಂತ್ರಿಕ ಬಿಕ್ಕಟ್ಟು ಬಗೆಹರಿಸಲು ನೇಪಾಳದಿಂದ ಸಮಿತಿ ರಚನೆ
ಭಾರತದೊಂದಿಗಿನ ರಾಜಕೀಯ-ರಾಜತಾಂತ್ರಿಕ ಬಿಕ್ಕಟ್ಟನ್ನು ಬಗೆಹರಿಸಿಕೊಳ್ಳಲು ನೇಪಾಳ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ.

ಕಠ್ಮಂಡು: ಭಾರತದೊಂದಿಗಿನ ರಾಜಕೀಯ-ರಾಜತಾಂತ್ರಿಕ ಬಿಕ್ಕಟ್ಟನ್ನು ಬಗೆಹರಿಸಿಕೊಳ್ಳಲು ನೇಪಾಳ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ.
ಹೊಸ ಸಂವಿಧಾನವನ್ನು ವಿರೋಧಿಸಿ ನೇಪಾಳದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಭಾರತದಿಂದ ಪೂರೈಕೆಯಾಗಬೇಕಿದ್ದ ಸರಕುಗಳು ತುಂಬಿರುವ ಲಾರಿಗಳು ನೇಪಾಳದ ಗಡಿ ಭಾಗದಲ್ಲೇ ಸ್ಥಗಿತಗೊಂಡಿದೆ. ಈ ಬೆಳವಣಿಗೆಯಿಂದ ನೇಪಾಳಕ್ಕೆ ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಎದುರಾಗಿದೆ.
ನೇಪಾಳದ ಗಡಿಯಲ್ಲಿ ಉಂಟಾಗಿರುವ ಬಿಕ್ಕಟ್ಟಿನ್ನು ಬಗೆಹರಿಸಿಕೊಳ್ಳಲು ನೇಪಾಳದ ಸರ್ಕಾರ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ. ನೇಪಾಳದ ವಿದೇಶಾಂಗ ಸಚಿವ ಮಹೇಂದ್ರ ಬಹದ್ದೂರ್ ಪಾಂಡೆ ಸಮಿತಿಯ ನೇತೃತ್ವ ವಹಿಸಿದ್ದು, ಮುಖ್ಯ ಕಾರ್ಯದರ್ಶಿ ಸೋಮ್ ಲಾಲ್ ಸುಬೇಡಿ ವಾಣಿಜ್ಯ ಮತ್ತು ಸರಬರಾಜು ಕಾರ್ಯದರ್ಶಿ ಸಮಿತಿಯ ಸದಸ್ಯರಾಗಿದ್ದಾರೆ. ತ್ರಿಸದಸ್ಯ ಸಮಿತಿ ಸದಸ್ಯರು ಸದ್ಯದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದು, ಕೇಂದ್ರ ಸರ್ಕಾರದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಉನ್ನತಮಟ್ಟದ ಸಭೆ ನಡೆಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


