ವಿದೇಶ

ಎಚ್‍ಐವಿ ಸೋಂಕಿನ ಅಪಾಯದಲ್ಲಿ ಭಾರತ

ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳನ್ನು ಸರಿಯಾಗಿ ನಿರ್ವಹಿಸದೇ ಇರುವುದರಿಂದಾಗಿ ಹಾಗೂ ಆರೋಗ್ಯ ಕಾರ್ಯಕರ್ತರಿಗೆ...

ಎಚ್‍ಐವಿ ಸೋಂಕಿನ ಅಪಾಯದಲ್ಲಿ ಭಾರತ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳನ್ನು ಸರಿಯಾಗಿ ನಿರ್ವಹಿಸದೇ ಇರುವುದರಿಂದಾಗಿ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ವೇತನ ನೀಡಿಕೆಯನ್ನೂ ವಿಳಂಬಗೊಳಿಸಿರುವುದರಿಂದಾಗಿ ಹೆಚ್‍ಐವಿ ಪೀಡಿತ ಭಾರತೀಯರ ಸಂಖ್ಯೆಯಲ್ಲಿ ಏರಿಕೆ ಕಾಣುವ ಸಂಭವ ಹೆಚ್ಚಾಗಿದೆ ಎಂದು ಏಷ್ಯಾ ಮತ್ತು ಪೆಸಿಫಿಕ್ ವಿಶ್ವಸಂಸ್ಥೆಯ ಏಡ್ಸ್ ನಿಯೋಗ ಅಭಿಪ್ರಾಯ ವ್ಯಕ್ತಪಡಿಸಿದೆ. 

10 ವರ್ಷಗಳಿಂದ ಉತ್ತಮ ಕಾರ್ಯಕ್ರಮ ನಡೆಸಿಕೊಂಡು ಬಂದು ಜಾಗತಿಕ ಮನ್ನಣೆ ಗಳಿಸಿದ್ದ ಭಾರತ ತನ್ನದೇ ತಪ್ಪಿನಿಂದಾಗಿ ಮತ್ತೆ ಅಪಾಯ ಆಹ್ವಾನಿಸಿ ಕೊಳ್ಳಲಿದೆ ಎಂದು ಸಂಸ್ಥೆ ಹೇಳಿದೆ. ಫೆಬ್ರವರಿ ಯಲ್ಲಿ ಕೇಂದ್ರಸರ್ಕಾರ, ವಿಶ್ವಸಂಸ್ಥೆಯ ಏಡ್ಸ್ ಬಜೆಟ್ ಹಣದಲ್ಲಿ ಕಡಿತಗೊಳಿಸಲು ಮನವಿ ಮಾಡಿದ್ದಲ್ಲದೆ ರಾಜ್ಯಸರ್ಕಾರಗಳು ಈ ಕೊರತೆ ಭರಿಸಬೇಕೆಂದು ಕೋರಿತ್ತು. ಆದರೆ ರಾಜ್ಯಗಳು ನಿರ್ಲಕ್ಷ್ಯ ವಹಿಸಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.