ಲಂಡನ್‍ನಲ್ಲಿ ಅಧ್ಯಯನ ಭಾರತಕ್ಕೆ ಮೂರನೆ ಸ್ಥಾನ
ಬ್ರಿಟನ್‍ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳಲ್ಲಿ ಭಾರತೀಯರು ಮೂರನೆ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ...

Published On :
ಲಂಡನ್ : ಬ್ರಿಟನ್‍ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳಲ್ಲಿ ಭಾರತೀಯರು ಮೂರನೆ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ ಅಮೆರಿಕ ಎರಡನೇ ಸ್ಥಾನದಲ್ಲಿದೆ.
ಲಂಡನ್‍ನಲ್ಲಿನ ವಿವಿಧ ವಿವಿಗಳಲ್ಲಿ ಓದುತ್ತಿರುವ ವಿದ್ಯಾ ರ್ಥಿಗಳಿಂದ ಬ್ರಿಟನ್‍ಗೆ ವಾರ್ಷಿಕ 300 ಕೋಟಿ ಪೌಂಡ್ (ಸರಿಸುಮಾರು ರು.30,000 ಕೋಟಿ) ಹಣ ಬರಲಿದ್ದು 37 ಸಾವಿರ ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಲಂಡನ್ ಅಂಡ್ ಪಾರ್ಟನರ್ಸ್ ವರದಿ ಹೇಳಿದೆ.
2013-14ನೇ ಸಾಲಿನಲ್ಲಿ ಭಾರತೀಯ ವಿದ್ಯಾರ್ಥಿಗಲು 13 ಕೋಟಿ ಪೌಂಡ್ ವೆಚ್ಚ ಮಾಡಿದ್ದಾರೆ. ಇದರಲ್ಲಿ 5.6 ಕೋಟಿ ಬೋಧನಾ ಶುಲ್ಕಕ್ಕೆ ವೆಚ್ಚ ಮಾಡಿದ್ದರೆ ಉಳಿದದ್ದನ್ನು ಊಟ, ವಸತಿ ಮತ್ತಿತರಕ್ಕೆ ವೆಚ್ಚ ಮಾಡಿ ದ್ದಾರೆ. ಆದರೂ ಚೀನಾಗೆ ಹೋಲಿಸಿದರೆ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ ಎಂದು ವರದಿ ವಿವರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


