ವಿದೇಶ

ಭಾರತ ಅಫ್ಘಾನಿಸ್ತಾನದೊಂದಿಗೆ ಬಲವಾದ ದ್ವಿಪಕ್ಷೀಯ ಸಂಬಂಧ ಬಯಸುತ್ತಿದೆ: ವಿದೇಶಾಂಗ ಇಲಾಖೆ ಅಧಿಕಾರಿ

ಭಾರತ ಅಪ್ಘಾನಿಸ್ತಾನದೊಂದಿಗೆ ಬಲವಾದ ಸಂಬಂಧ ಹೊಂದಲು ಬಯಸುತ್ತಿದೆ ಎಂದು ಹಿರಿಯ ಭಾರತೀಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಭಾರತ ಅಫ್ಘಾನಿಸ್ತಾನದೊಂದಿಗೆ ಬಲವಾದ ದ್ವಿಪಕ್ಷೀಯ ಸಂಬಂಧ ಬಯಸುತ್ತಿದೆ:  ವಿದೇಶಾಂಗ ಇಲಾಖೆ ಅಧಿಕಾರಿ
ಭಾರತ- ಅಪ್ಘಾನಿಸ್ತಾನ
Published On :

ಕಾಬುಲ್: ಭಾರತ ಅಪ್ಘಾನಿಸ್ತಾನದೊಂದಿಗೆ ಬಲವಾದ ಸಂಬಂಧ ಹೊಂದಲು ಬಯಸುತ್ತಿದೆ ಎಂದು ಹಿರಿಯ ಭಾರತೀಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಭಾರತದೊಂದಿಗೆ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದುವುದರಿಂದ ಅಪ್ಘಾನಿಸ್ತಾನದ ಆರ್ಥಿಕತೆ ಹೊಸ ಎತ್ತರಕ್ಕೆ ಬೆಳೆಯಲಿದೆ ಎಂದು ವಿದೇಶಾಂಗ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿರುವ ಸುಜಾತಾ ಮೆಹ್ತಾ ಅಭಿಪ್ರಾಯಪಟ್ಟಿದ್ದಾರೆ.
 ಅಪ್ಘಾನಿಸ್ತಾನದಿಂದ ಮಧ್ಯ ಏಷ್ಯಾಗೆ ಸಂಪರ್ಕ ಕಲ್ಪಿಸುವ ಚಬಹರ್ ಪೋರ್ಟ್ ಯೋಜನೆಯಲ್ಲಿ ಭಾರತ ನಿರತವಾಗಿದೆ. ಇದರಿಂದಾಗಿ ಅಫ್ಘಾನಿಸ್ತಾನಕ್ಕೆ ಹೆಚ್ಚಿನ ಉಪಯೋಗವಾಗಲಿದೆ ಎಂದು ಅಫ್ಘಾನಿಸ್ಥಾನ ಆರನೇ ಪ್ರಾದೇಶಿಕ ಆರ್ಥಿಕ ಸಹಕಾರ ಅಧಿವೇಶನದಲ್ಲಿ ಭಾಗವಹಿಸಿ ಮಾತನಾಡಿದ ಮೆಹ್ತಾ ತಿಳಿಸಿದ್ದಾರೆ. ಕಾಬುಲ್ ನಲ್ಲಿ ನಡೆಯುತ್ತಿರುವ ಈ ಅಧಿವೇಶನದಲ್ಲಿ ಸುಮಾರು 30 ಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.