ಭಾರತಕ್ಕೆ ಶ್ರೀಲಂಕಾ ಪ್ರಧಾನಿ ವಿಕ್ರಮಸಿಂಘೆ ಪ್ರಥಮ ವಿದೇಶ ಪ್ರವಾಸ
ಇತ್ತೀಚೆಗಷ್ಟೆ ಶ್ರೀಲಂಕಾದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದ ರನಿಲ್ ವಿಕ್ರಮಸಿಂಘೆ ಭಾರತಕ್ಕೆ ಪ್ರಥಮ ವಿದೇಶ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.

ಕೊಲಂಬೊ: ಇತ್ತೀಚೆಗಷ್ಟೆ ಶ್ರೀಲಂಕಾದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದ ರನಿಲ್ ವಿಕ್ರಮಸಿಂಘೆ ಭಾರತಕ್ಕೆ ಪ್ರಥಮ ವಿದೇಶ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.
ಸೆ.14 ರಿಂದ 16 ವರೆಗೆ ವಿಕ್ರಮ ಸಿಂಘೆ ಅವರ ವಿದೇಶ ಪ್ರವಾಸ ನಿಗದಿಯಾಗಿದ್ದು ಈ ಅವಧಿಯಲ್ಲಿ ಭಾರತೀಯ ಮೀನುಗಾರರ ಸಮಸ್ಯೆ, ಆರ್ಥಿಕ ಒಪ್ಪಂದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನೂ ರನಿಲ್ ವಿಕ್ರಮ ಸಿಂಘೆ ಸಭೆ ನಡೆಸಲಿದ್ದಾರೆ. ಶ್ರೀಲಂಕಾ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಮೈತ್ರಿಪಾಲ ಸಿರಿಸೇನ ಸಹ ಪ್ರಥಮ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿಕೊಂಡಿದ್ದರು. ಈಗ ಶ್ರೀಲಂಕಾ ಪ್ರಧಾನಿಯೂ ಅದೇ ಮಾರ್ಗ ಅನುಸರಿಸುತ್ತಿರುವುದು ಮಹತ್ವ ಪಡೆದುಕೊಂಡಿದೆ. ಕಳೆದ ತಿಂಗಳು ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಯುನೈಟೆಡ್ ನ್ಯಾಷನಲ್ ಪಾರ್ಟಿ ಪಕ್ಷ ಬಹುಮತ ಪಡೆದು ವಿಕ್ರಮ ಸಿಂಘೆ ಪ್ರಧಾನಿಯಾಗಿ ಆಯ್ಕೆಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


