ಹೆಚ್ -1ಬಿ ವೀಸಾ ನೀಡಿಕೆಯಲ್ಲಿ ಕಾನೂನು ಉಲ್ಲಂಘನೆಯಾಗಿಲ್ಲ: ಇನ್ಫೋಸಿಸ್
ನೌಕರರಿಗೆ ಹೆಚ್ -1ಬಿ ವೀಸಾ ನೀಡಿದ್ದರಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ತನಿಖೆಯ ನಂತರ ಅಮೆರಿಕ ಸರ್ಕಾರ ಸ್ಪಷ್ಟಪಡಿಸಿದೆ ಎಂದು ಭಾರತದ ಎರಡನೇ...

ನ್ಯೂಯಾರ್ಕ್: ನೌಕರರಿಗೆ ಹೆಚ್ -1ಬಿ ವೀಸಾ ನೀಡಿದ್ದರಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ತನಿಖೆಯ ನಂತರ ಅಮೆರಿಕ ಸರ್ಕಾರ ಸ್ಪಷ್ಟಪಡಿಸಿದೆ ಎಂದು ಭಾರತದ ಎರಡನೇ ಅತಿ ದೊಡ್ಡ ಸಾಫ್ಟ್ ವೇರ್ ಸೇವೆ ಕಂಪೆನಿಯಾದ ಇನ್ಫೋಸಿಸ್ ಮಂಗಳವಾರ ತಿಳಿಸಿದೆ.
ದಕ್ಷಿಣ ಕ್ಯಾಲಿಫೋರ್ನಿಯಾ ಎಡಿಸನ್ ನಲ್ಲಿನ ಕಂಪೆನಿಯ ಪ್ರೊಜೆಕ್ಟ್ ನಲ್ಲಿ ಉದ್ಯೋಗಿಗಳಿಗೆ ಸಂಬಂಧಿಸಿದ ಕಾನೂನುಗಳನ್ನು ಸರಿಯಾಗಿ ಪಾಲಿಸಲಾಗಿದೆ ಎಂದು ಅಮೆರಿಕದ ಕಾನೂನು ಇಲಾಖೆ ತನಿಖೆ ನಂತರ ವರದಿ ನೀಡಿದೆ ಎಂದು ಇನ್ಫೋಸಿಸ್ ಹೇಳಿಕೆಯಲ್ಲಿ ತಿಳಿಸಿದೆ.
ಕಳೆದ ಜೂನ್ ನಿಂದ ಆರಂಭಿಸಲಾಗಿದ್ದ ತನಿಖೆಯಲ್ಲಿ 145 ಪುಟಗಳ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ಯಾವುದರಲ್ಲಿಯೂ ಕಾನೂನು ಉಲ್ಲಂಘನೆ ಕಂಡುಬಂದಿಲ್ಲ ಎಂದು ಹೇಳಲಾಗಿದೆ.
ನೌಕರರನ್ನು ಅಮೆರಿಕದ ಕಂಪೆನಿಯಲ್ಲಿ ನೇಮಿಸಿಕೊಳ್ಳುವಾಗ ಕಾನೂನು ಉಲ್ಲಂಘಿಸಲಾಗಿದೆ ಎಂದು ಅಮೆರಿಕ ಸರ್ಕಾರದ ಕಾರ್ಮಿಕ ಇಲಾಖೆ ಇನ್ಫೋಸಿಸ್ ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ವಿರುದ್ಧ ತನಿಖೆ ಆರಂಭಿಸಿತ್ತು. ಈ ಕುರಿತು ಟಿಸಿಎಸ್ ಪ್ರತಿಕ್ರಿಯೆ ನೀಡಬೇಕಾಗಿದೆ.
ಅಮೆರಿಕದ ಹೆಚ್ 1ಬಿ ವೀಸಾ ವಲಸೆ ರಹಿತ ವೀಸಾವಾಗಿದ್ದು, ಅಮೇರಿಕಾದ ಕಂಪನಿಗಳು ವಾಸ್ತುಶೈಲಿ, ಇಂಜಿನಿಯರಿಂಗ್, ಗಣಿತ, ವಿಜ್ಞಾನ, ಔಷಧಿ ಮೊದಲಾದ ಕ್ಷೇತ್ರಗಳಲ್ಲಿ ಸೈದ್ಧಾಂತಿಕ ಅಥವಾ ತಾಂತ್ರಿಕ ಪರಿಣತಿಯ ಅಗತ್ಯವಿರುವ ವಿಶೇಷ ಕೌಶಲದ ವೃತ್ತಿಗಳಲ್ಲಿ ವಿದೇಶಿ ನೌಕರರನ್ನು ನೇಮಿಸಿಕೊಳ್ಳುವುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


