ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಮೂಗನ್ನೆ ಕಚ್ಚಿ ತಿಂದ ಪತಿ ಮಹಾಶಯ
ಫೋನ್ ಮಾಡಿದಾಗ ತನ್ನ ಪತ್ನಿ ಕರೆ ಸ್ವೀಕರಿಸಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಗಂಡನೊಬ್ಬ ತನ್ನ ಹೆಂಡತಿಯ ಮೂಗನ್ನೇ ಕಚ್ಚಿ ತಿಂದ ...

ಫೋನ್ ಮಾಡಿದಾಗ ತನ್ನ ಪತ್ನಿ ಕರೆ ಸ್ವೀಕರಿಸಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಗಂಡನೊಬ್ಬ ತನ್ನ ಹೆಂಡತಿಯ ಮೂಗನ್ನೇ ಕಚ್ಚಿ ತಿಂದ ಆಘಾತಕರ ಘಟನೆ ಚೀನಾದಲ್ಲಿ ನಡೆದಿದೆ.
ಚೀನಾದ ಷಾನ್ಡಾಂಗ್ ಪ್ರಾಂತ್ಯದಲ್ಲಿ ತನ್ನ ಪತ್ನಿ ಯೂಂಗ್ ಜತೆ ಈ ಪತಿ ಮಹಾಶಯ ವಾಸವಾಗಿದ್ದ. ಹಲವು ದಿನಗಳಿಂದ ಇವರ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿತ್ತು. ಹಾಗಾಗಿ ಇವರು ಪ್ರತ್ಯೇಕವಾಗಿ ವಾಸವಾಗಿದ್ದರು. ಅಲ್ಲದೆ ಇವರಿಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ಅಲ್ಲಿನ ಪತ್ರಿಕೆಗಳು ವರದಿ ಮಾಡಿವೆ.
ಒಂದು ದಿನ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಪತಿ ತನ್ನ ಹೆಂಡತಿ ಯೂಂಗ್ ಗೆ ಕರೆ ಮಾಡಿದ್ದಾನೆ. ಆದರೆ ಆಕೆ ಆತನ ದೂರವಾಣಿ ಕರೆಯನ್ನು ಸ್ವೀಕರಿಸಲಿಲ್ಲ. ಇದರಿಂದ ಸಿಟ್ಟುಗೊಂಡ ಪತಿ, ಯೂಂಗ್ ಳೊಂದಿಗೆ ಜಗಳವಾಡಿ ಮೂಗಿನ ಮೃದು ಭಾಗವನ್ನು ಸಂಪೂರ್ಣ ಕಚ್ಚಿ ಅಲ್ಲಿಂದ ಪರಾರಿಯಾಗಿದ್ದು, ಆಕೆ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಆಕೆಗೆ ಕಾಸ್ಮೆಟಿಕ್ ಸರ್ಜರಿ ಮಾಡುವ ಅವಶ್ಯಕತೆಯಿದೆ ಎಂದು ವೈದ್ಯರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


