ಲಿಬಿಯಾದಲ್ಲಿ ಇಬ್ಬರು ಭಾರತೀಯರ ಅಪಹರಣ
ಲಿಬಿಯಾದ ತ್ರಿಪೋಲಿಯಂದ ಇಬ್ಬರು ಭಾರತೀಯರನ್ನು ಅಪಹರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ...

ನವದೆಹಲಿ: ಲಿಬಿಯಾದ ತ್ರಿಪೋಲಿಯಂದ ಇಬ್ಬರು ಭಾರತೀಯರನ್ನು ಅಪಹರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಅಪಹರಣಕ್ಕೊಳಗಾದ ಭಾರತೀಯರ ಬಗ್ಗೆ ತನಿಖೆ ನಡೆಸಲು ರಾಜತಾಂತ್ರಿಕ ಮಟ್ಟದ ಮಾತುಕೆತ ನಡೆದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ತಿಳಿಸಿದ್ದಾರೆ.
ಭಾರತೀಯರನ್ನು ಸುರಕ್ಷಿತವಾಗಿ ಬಿಡುಗಡೆಗೊಳಿಸಿ ವಾಪಸ್ ಕರೆತರುವಲ್ಲಿ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.
ಅಪಹರಣಕ್ಕೊಳಗಾದವರನ್ನು ಒಡಿಸ್ಸಾ ಮೂಲದ ಪ್ರವಶ್ ರಂಜಾನ್ ಸಮಾಲ್ ಹಾಗೂ ಆಂಧ್ರ ಪ್ರದೇಶದ ರಾಮಮೂರ್ತಿ ಕೋಸನಮ್ ಎಂದು ಹೇಳಲಾಗಿದೆ. ಅವರು ಕೆಲಸ ಮಾಡುತ್ತಿದ್ದ ಶಿರ್ಟೆಯ ಐಬಿಎನ್- ಇ-ಸಿನಾ ಎಂಬ ಸ್ಥಳದಿಂದ ಕಿಡ್ನಾಪ್ ಮಾಡಲಾಗಿದೆ. ಆದರೆ ಯಾರು ಅಪಹರಿಸಿದ್ದಾರೆ ಎನ್ನುವ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ ಎಂದು ವಿದೇಶಾಂಗ ಸಚಿವಲಾಯ ತಿಳಿಸಿದೆ.
ಕಳೆದ ಆಗಸ್ಟ್ ನಲ್ಲಿ ನಾಲ್ವರು ಭಾರತೀಯರನ್ನು ಕಿಡ್ನಾಪ್ ಮಾಡಿ ಒತ್ತೆಯಾಳುಗಳಾಗಿರಿಸಿಕೊಳ್ಳಲಾಗಿತ್ತು. ಅದರಲ್ಲಿ ಇಬ್ಬರು ಕರ್ನಾಟಕದವರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


