ವಿದೇಶ

ತಮಿಳುನಾಡಿನ 15 ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ

ಅಂತರಾಷ್ಟ್ರೀಯ ಜಲ ಗಡಿ ದಾಟಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ತಮಿಳುನಾಡಿನ 15 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ...

ತಮಿಳುನಾಡಿನ 15 ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ
ಸಾಂದರ್ಭಿಕ ಚಿತ್ರ
Published On :

ರಾಮೇಶ್ವರಂ: ಅಂತರಾಷ್ಟ್ರೀಯ ಜಲ ಗಡಿ ದಾಟಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ತಮಿಳುನಾಡಿನ 15 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಸೋಮವಾರ ಬಂಧಿಸಿದೆ.

ಕಾರೈ ನಗರ್ ಎಂಬಲ್ಲಿ ಶ್ರೀಲಂಕಾ ನೌಕಾಪಡೆ ಮೀನುಗಾರರನ್ನು ಬಂಧಿಸಿದೆ. ತಮಿಳುನಾಡಿನ ನಾಗಪಟ್ಟಣಂನ ಅಕ್ಕಾರೈ ಪೆಟ್ಟಯಿಂದ 2 ದೋಣಿಗಳಲ್ಲಿ ಮೀನುಗಾರಿಕೆಗೆ ತೆರಳಿದ್ದರು ಎಂದು ಮೂಲಗಳು ತಿಳಿಸಿವೆ.

ಕಳೆದ ಸೋಮವಾರ ರಾತ್ರಿ ಕಚ್‌ತೀವ್‌ ಪ್ರದೇಶದಲ್ಲಿ ಮೀನು ಹಿಡಿಯುತ್ತಿದ್ದ 60 ಕ್ಕೂ ಹೆಚ್ಚು ದೋಣಿಗಳ ಮೀನುಗಾರಿಕಾ ಬಲೆಗಳು ಮತ್ತು ಇತರೆ ಸಲಕರಣೆಗಳನ್ನು ಲಂಕಾದ ನೌಕಾಪಡೆ ನಾಶ ಮಾಡಿ ಅವುಗಳನ್ನು ಸಮುದ್ರಕ್ಕೆ ಎಸೆದಿದ್ದರು, ಹೀಗಾಗಿ ಮೀನುಗಾರರು ಬರಿಗೈಯಲ್ಲಿ ಮರಳಿದ್ದರು ಎಂದು ಮೀನುಗಾರರು ಆರೋಪಿಸಿದ್ದಾರೆ. ಇನ್ನು ಬಂಧಿತ ಮೀನುಗಾರರನ್ನು ಕಾಂಗೆಸಂತುರೈ ಎಂಬಲ್ಲಿಗೆ ಕರೆದೊಯ್ಯಲಾಗಿದೆ ಎಂದು ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಸುಬ್ಬರಾಜ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.