ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಪಾಕ್ ಮಾಜಿ ರಾಯಭಾರಿ
ಪಾಕಿಸ್ತಾನ ಮತ್ತು ಭಾರತ ಮಧ್ಯೆ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತವೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಇಸ್ಲಾಮಾಬಾದ್...

ವಾಷಿಂಗ್ಟನ್: ಪಾಕಿಸ್ತಾನ ಮತ್ತು ಭಾರತ ಮಧ್ಯೆ "ಗಡಿ ನಿಯಂತ್ರಣ ರೇಖೆಯಲ್ಲಿ ಭಾರತವೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಇಸ್ಲಾಮಾಬಾದ್ ಹೇಳುತ್ತಿದೆ. ಆದರೆ ವಾಸ್ತವವಾಗಿ ಕದನ ವಿರಾಮ ಉಲ್ಲಂಘಿಸುತ್ತಿರುವುದು ಪಾಕಿಸ್ತಾನ ಎಂದು ಅಮೆರಿಕದಲ್ಲಿ ಪಾಕಿಸ್ಥಾನದ ಮಾಜಿ ರಾಯಭಾರಿ ಹುಸೇನ್ ಹಕ್ಕಾನಿ ಹೇಳಿದ್ದಾರೆ.
ಎಎನ್‌ಐ ಜತೆಗೆ ಮಾತನಾಡಿರುವ ಅವರು, ಕಾಶ್ಮೀರದಲ್ಲಿನ ಯಥಾಸ್ಥಿತಿಯನ್ನು ಬದಲಾಯಿಸಿ ಶಾಂತಿ ಕದಡಲು ಪಾಕಿಸ್ತಾನ ಈ ರೀತಿ ಮಾಡುತ್ತಿದೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಭಾರತವು ಕಾಶ್ಮೀರದಲ್ಲಿನ ಸ್ಥಿತಿಯ ಬಗ್ಗೆ ಸಂತುಷ್ಟವಾಗಿದೆ' ಎಂದು ಹೇಳಿದರು.
"ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಕಡೆಯಿಂದ ಎಷ್ಟೇ ಸಂಖ್ಯೆಯಲ್ಲಿ ಕದನ ವಿರಾಮ ಉಲ್ಲಂಘನೆ ನಡೆದರೂ ಅದರಿಂದ ಭಯೋತ್ಪಾದನೆ, ಹಿಂಸೆ ಹೆಚ್ಚಬಹುದಷ್ಟೇ ಹೊರತು ಪಾಕಿಸ್ತಾನಕ್ಕಾಗಲೀ, ಭಾರತಕ್ಕಾಗಲೀ ಅಥವಾ ಕಾಶ್ಮೀರದ ಜನರಿಗಾಗಲಿ ಯಾವುದೇ ರೀತಿಯ ಒಳಿತಾಗದು, ಭಾರತಕ್ಕೆ ಬಹಳ ದೊಡ್ಡ ಹಾನಿಯಾಗದು ಎಂದು ಹಕ್ಕಾನಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


