ಇಂಡೋನೇಷ್ಯಾದಲ್ಲಿ ಪ್ರಭಲ ಭೂಕಂಪ: 60 ಜನರಿಗೆ ಗಾಯ
ಇಂಡೋನೇಷ್ಯಾದ ಪೂರ್ವದಲ್ಲಿರುವ ಪಶ್ಚಿಮ ಪಪುವಾ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 60 ಜನರು ಗಾಯಗೊಂಡಿದ್ದಾರೆ...

Published On :
ಮನೊಕವಾರಿ(ಇಂಡೋನೇಷ್ಯಾ): ಇಂಡೋನೇಷ್ಯಾದ ಪೂರ್ವದಲ್ಲಿರುವ ಪಶ್ಚಿಮ ಪಪುವಾ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 60 ಜನರು ಗಾಯಗೊಂಡಿದ್ದಾರೆ.
ಶುಕ್ರವಾರ ಬೆಳಗ್ಗೆ 1 ಗಂಟೆ ಸುಮಾರಿಗೆ 6.6ರಷ್ಟು ತೀವ್ರತೆಯಲ್ಲಿ ಭೂಮಿ ಕಂಪಿಸಿದ್ದು ಆತಂಕಗೊಂಡ ಜನರು ಕಟ್ಟಡ, ಮನೆ, ಹೋಟೆಲ್ ಸೇರಿದಂತೆ ಆಸ್ಪತ್ರೆಗಳಿಂದಲೂ ಹೊರಗೆ ಓಡಿ ಬಂದ ಘಟನೆಗಳು ವರದಿಯಾಗಿದೆ. ಭೂಕಂಪನದಿಂದಾಗಿ 200 ಮನೆಗಳು ಹಾನಿಗೊಳಗಾಗಿವೆ.
ಪಶ್ವಿಮ ಪಪುವಾ ಪ್ರಾಂತ್ಯದ ಸೊರೊಂಗ್ ಪಟ್ಟಣದಿಂದ 28 ಕಿಲೋ ಮೀಟರ್ ದೂರದಲ್ಲಿ ಹಾಗೂ ಭೂಮೇಲೈನಿಂದ 24 ಕಿಲೋ ಮೀಟರ್ ಆಳದಲ್ಲಿ ಕಂಪನದ ಕೇಂದ್ರವಿತ್ತು ಎಂದು ಅಮೆರಿಕದ ಭೂವೈಜ್ಞಾನಿಕ ಸರ್ವೇಕ್ಷಣಾ ಕೇಂದ್ರ ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ.
ಘಟನೆಯ ಹಿನ್ನೆಲೆಯಲ್ಲಿ ಮನೆ ಮಠ ಕಳೆದುಕೊಂಡಿರುವ ನೂರಾರು ಜನರನ್ನು ತಾತ್ಕಾಲಿಕ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


