ಒಳ್ಳೆಯ ಭಯೋತ್ಪಾದನೆ, ಕೆಟ್ಟ ಭಯೋತ್ಪಾದನೆ ಇಲ್ಲ ಇರುವುದೊಂದೇ ಉಗ್ರವಾದ: ಮೋದಿ
ಭಯೋತ್ಪಾದನೆಯನ್ನು ಒಳ್ಳೆಯ ಭಯೋತ್ಪಾದನೆ, ಕೆಟ್ಟ ಭಯೋತ್ಪಾದನೆ ಎಂದು ವ್ಯಾಖ್ಯಾನಿಸಲು ಸಾಧ್ಯವಿಲ್ಲ- ಪ್ರಧಾನಿ ನರೇಂದ್ರ ಮೋದಿ...

ಸ್ಯಾನ್ ಜೋಸ್: ಭಯೋತ್ಪಾದನೆಯನ್ನು ಒಳ್ಳೆಯ ಭಯೋತ್ಪಾದನೆ, ಕೆಟ್ಟ ಭಯೋತ್ಪಾದನೆ ಎಂದು ವ್ಯಾಖ್ಯಾನಿಸಲು ಸಾಧ್ಯವಿಲ್ಲ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆಯನ್ನು ವ್ಯಾಖ್ಯಾನಿಸಲು ಅತಿ ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವ ವಿಶ್ವಸಂಸ್ಥೆಯ ನಿಲುವಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯಾವುದು ಭಯೋತ್ಪಾದನೆ ಎಂಬುದನ್ನು ನಿರ್ಧರಿಸುವುದಕ್ಕೇ ಹೆಚ್ಚು ಸಮಯ ತೆಗೆದುಕೊಂಡರೆ ಅದನ್ನು ನಿರ್ಮೂಲನೆ ಮಾಡುವುದು ಹೇಗೆ ಎಂದು ಮೋದಿ ಪ್ರಶ್ನಿಸಿದ್ದಾರೆ. ಕ್ಯಾಲಿಫೋರ್ನಿಯಾದ ಸ್ಯಾನ್ ಹೊಸೆಯ ಎಸ್ ಎಪಿ ಸೆಂಟರ್ ನಲ್ಲಿ ಅನಿವಾಸಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿರುವ ಅವರು, ಭಯೋತ್ಪಾದನೆಯನ್ನು ಗುರುತಿಸುವ ಬಗ್ಗೆ ವಿಶ್ವ ಸಂಸ್ಥೆ ಶೀಘ್ರವೇ ನಿರ್ಧಾರ ಕೈಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಯೋತ್ಪಾದನೆ ಹೇಗೆ ಘಟಿಸುತ್ತದೆ ಎಂಬುದನ್ನು ನಿರ್ಧರಿಸದೇ ನಾವು ಮಾನವೀಯತೆಯನ್ನು ರಕ್ಷಿಸುವುದಕ್ಕೆ ಸಾಧ್ಯವಿಲ್ಲ. ಭಯೋತ್ಪಾದನೆ ಮಾನವೀಯತೆಗೆ ಮುಳುವಾಗಿದೆ. ಅದರಲ್ಲಿ ಒಳ್ಳೆಯ ಭಯೋತ್ಪಾದನೆ, ಕೆಟ್ಟ ಭಯೋತ್ಪಾದನೆ ಎಂದು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಕೆಲವು ವರ್ಷಗಳ ಹಿಂದೆ ಯುಎಸ್ ನ ಸರ್ಕಾರಿ ಅಧಿಕಾರಿಗಳೊಂದಿಗೆ ತಮ್ಮ ಮಾತುಕತೆಯನ್ನು ನೆನಪಿಸಿಕೊಂಡ ಪ್ರಧಾನಿ ಮೋದಿ, "1993 ರಲ್ಲಿ ಭಾರತ ಭಯೋತ್ಪಾದನೆಯ ಬಲಿಪಶುವಾಗಿತ್ತು ಎಂಬುದನ್ನು ಮನವರಿಕೆ ಮಾಡಿಕೊಟ್ಟೆ ಆದರೂ ಅವರು ಅದನ್ನು ಭಯೋತ್ಪಾದನೆಯ ಕೃತ್ಯ ಎಂಬುದನ್ನು ಒಪ್ಪದೇ ಕಾನೂನು ಸುವ್ಯವಸ್ಥೆ ಸಮಸ್ಯೆ ಎಂದಿದ್ದರು ಎಂದು ಮೋದಿ ಹೇಳಿದ್ದಾರೆ.
ಇದಾದ ಕೆಲವೇ ವರ್ಷಗಳಲ್ಲಿ(2001) ರಲ್ಲಿ ಸ್ವತಃ ಅಮೇರಿಕಾ ಭಯೋತ್ಪಾದಕರ ದಾಳಿಗೆ ತುತ್ತಾಯಿತು. ಈ ಘಟನೆ ಬಳಿಕ ಭಯೋತ್ಪಾದನೆ ವಿಷಯದಲ್ಲಿ ಅಮೆರಿಕಾದ ನಿಲುವು ಬದಲಾಯಿತು ಎಂದು ಮೋದಿ ಹೇಳಿದ್ದಾರೆ. ಭಾರತ ಸತತ 40 ವರ್ಷಗಳಿಂದ ಭಯೋತ್ಪಾದನೆಯ ಬಲಿಪಶುವಾಗಿದೆ. ಉಗ್ರವಾದ ಎಲ್ಲಿ ಯಾರನ್ನು ಯಾವಾಗಬೇಕಾದರೂ ದಾಳಿ ಮಾಡಬಹುದು. ಆದ್ದರಿಂದ ಅದನ್ನು ನಿರ್ಮೂಲನೆ ಮಾಡುವ ಜವಾಬ್ದಾರಿ ಜಗತ್ತಿನ ಮೇಲಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


