ಪಾಕ್ ಉಗ್ರಪೀಡಿತ ಅಲ್ಲ, ಉಗ್ರರ ಹುಟ್ಟೂರು: ವಿಶ್ವಸಂಸ್ಥೆಯಲ್ಲಿ ಭಾರತ
ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ಹಾಗೂ ಕದನ ವಿರಾಮ ಉಲ್ಲಂಘನೆ ವಿಷಯ ಕೆದಕಿದ ಪಾಕಿಸ್ತಾನಕ್ಕೆ ಖಡಕ್ ತಿರುಗೇಟು ನೀಡಿರುವ ಭಾರತ, ಪಾಕಿಸ್ತಾನ ಉಗ್ರ ಪೀಡಿತ...

ವಿಶ್ವಸಂಸ್ಥೆ: ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ಹಾಗೂ ಕದನ ವಿರಾಮ ಉಲ್ಲಂಘನೆ ವಿಷಯ ಕೆದಕಿದ ಪಾಕಿಸ್ತಾನಕ್ಕೆ ಖಡಕ್ ತಿರುಗೇಟು ನೀಡಿರುವ ಭಾರತ, ಪಾಕಿಸ್ತಾನ ಉಗ್ರ ಪೀಡಿತ ಅಲ್ಲ. ಅದು ಉಗ್ರರ ತವರೂರು ಎಂದು ವಿಶ್ವಸಂಸ್ಥೆಯಲ್ಲಿ ಹೇಳಿದೆ.
ವಿಶ್ವಸಂಸ್ಥೆಯ ಮಹಾಸಭೆಯ ಚರ್ಚೆಯ ವೇಳೆ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರ ಹೇಳಿಕೆಗೆ ಉತ್ತರಿಸಿರುವ ವಿಶ್ವಸಂಸ್ಥೆಯ ಭಾರತದ ಮೊದಲ ಕಾರ್ಯದರ್ಶಿ ಅಭಿಷೇಕ್ ಸಿಂಗ್ ಅವರು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಪಾಕಿಸ್ತಾನ ಮತ್ತೆ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ವಿಷಾದನೀಯ. ಪಾಕಿಸ್ತಾನ ಸತ್ಯವನ್ನು ತಿರುಚಿ ಸುಳ್ಳನ್ನು ಪ್ರತಿಪಾದಿಸುತ್ತಿದೆ ಎಂದರು.
ಪಾಕ್ ಆಕ್ರಮಿತ ಕಾಶ್ಮೀರಿಗಳಿಂದ ಬೃಹತ್ ಧರಣಿ ವಿಚಾರವನ್ನು ಸಹ ಭಾರತ ಇಂದು ವಿಶ್ವಸಂಸ್ಥೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಪ್ರಸ್ತಾಪಿಸಲದ್ದಾರೆ.
ನಿನ್ನೆ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಮಾತನಾಡಿದ್ದ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು, ಭಾರತದಿಂದಲೇ ನಿರಂತರ ಕದನ ವಿರಾಮ ಉಲ್ಲಂಘನೆಯಾಗುತ್ತಿದೆ. ಇದರಿಂದ ಪಾಕಿಸ್ತಾನದಲ್ಲಿ ಲಕ್ಷಾಂತರ ಮಂದಿ ಮಹಿಳೆಯರು ಮತ್ತು ಮಕ್ಕಳು ಅಸು ನೀಗಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ಪಾಕಿಸ್ತಾನ ಉಗ್ರರ 'ಮೊದಲ ಬಲಿಪಶು' ಪಾಕಿಸ್ತಾನ ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


