ವಿದೇಶ

ಜಪಾನ್ ನಲ್ಲಿ ಪ್ರಬಲ ಭೂಕಂಪಕ್ಕೆ 9 ಬಲಿ: ನೂರಾರು ಮನೆ ನೆಲಸಮ

ಜಪಾನ್ ನಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ್ದ ಭೂಕಂಪನದಲ್ಲಿ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದು, 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜಪಾನ್ ನಲ್ಲಿ ಪ್ರಬಲ ಭೂಕಂಪಕ್ಕೆ 9 ಬಲಿ: ನೂರಾರು ಮನೆ ನೆಲಸಮ
ಜಪಾನ್ ಭೂಕಂಪ (ಚಿತ್ರಕೃಪೆ: ಸಿಎನ್ ಎನ್)
Published On :

ಟೋಕಿಯೋ: ಜಪಾನ್ ನಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ್ದ ಭೂಕಂಪನದಲ್ಲಿ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದು, 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.6 ರಷ್ಟಿದ್ದು, ಭೂಕಂಪನದಿಂದಾಗಿ ದಕ್ಷಿಣ ಜಪಾನ್ ನಲ್ಲಿ ಹೆಚ್ಚಿನ ಹಾನಿಯಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣ ಜಪಾನ್ ಯೆಎಕಿ ಮತ್ತು ಮಶಿಕಿ  ಪ್ರದೇಶ ಭೂಕಂಪನದಲ್ಲಿ ತೀವ್ರ ಹಾನಿಗೀಡಾದ ಪ್ರದೇಶವಾಗಿದ್ದು, ಇಲ್ಲಿನ ಬಹುತೇಕ ಮನೆಗಳು ಮತ್ತು ಬೃಹತ್ ಕಟ್ಟಡಗಳು ನೆಲಕ್ಕುರುಳಿವೆ. ಕಟ್ಟಡಗಳ ಅವಶೇಷಗಳಡಿಯಲ್ಲಿ ನೂರಾರು  ಮಂದಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ.

ಭೂಕಂಪನದಿಂದಾಗಿ ಮನೆಗಳು ಕುಸಿದು ಬಿದ್ದಪರಿಣಾಮವೇ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಜಪಾನ್ ನ ನಿರ್ವಹಣಾ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಸಾವಿನ ಸಂಖ್ಯೆ ಮತ್ತಷ್ಟು  ಏರಿಕೆಯಾಗುವ ಕುರಿತು ಅವರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಪ್ರಸ್ತುತ ಭೂಕಂಪನದಿಂದಾಗಿ ಸುನಾಮಿ ಭೀತಿ ಇಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.