40 ತಾಲಿಬಾನ್ ಉಗ್ರರನ್ನು ಹೊಡೆದುರುಳಿಸಿದ ಅಫ್ಘಾನ್ ಸೇನೆ
ತಾಲಿಬಾನಿ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಆಫ್ಘಾನಿಸ್ತಾನ ಸೈನಿಕರು ಸುಮಾರು 40 ತಾಲಿಬಾಲಿ ಉಗ್ರರನ್ನು ಹತ್ಯೆ ಮಾಡಿದ್ದಾರೆ...

Published On :
ಕಾಬೂಲ್: ತಾಲಿಬಾನಿ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಆಫ್ಘಾನಿಸ್ತಾನ ಸೈನಿಕರು ಸುಮಾರು 40 ತಾಲಿಬಾಲಿ ಉಗ್ರರನ್ನು ಹತ್ಯೆ ಮಾಡಿದ್ದಾರೆ.
ಅಫ್ಘಾನಿಸ್ತಾನದ ಕುಂದೂಜ್ ಪ್ರಾಂತ್ಯದಲ್ಲಿ ಅಫ್ಘಾನ್ ಸೈನಿಕರು ನಡೆಸಿದ ಕಾರ್ಯಾಚರಣೆ ವೇಳೆ 40 ತಾಲಿಬಾನಿ ಉಗ್ರರು ಮೃತಪಟ್ಟಿದ್ದು, 8 ಉಗ್ರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನುಳಿದಂತೆ ಕಾರ್ಯಾಚರಣೆ ವೇಳೆ ನಾಲ್ವರು ಆಫ್ಘಾನಿಸ್ತಾನ್ ಸೈನಿಕರು ಮೃತಪಟ್ಟಿದ್ದು, 6 ಮಂದಿ ಗಾಯಗೊಂಡಿರುವುದಾಗಿ ಕುಂದೂಜ್ ನ ಪೊಲೀಸ್ ಮುಖ್ಯಾಧಿಕಾರಿ ಜನರಲ್ ಮೊಹಮ್ಮದ್ ಖಾಸಿಮ್ ಹೇಳಿದ್ದಾರೆ.
ಕುಂದೂಜ್ ನಗರದ ಉತ್ತರ ಭಾಗದಲ್ಲಿ ತಾಲಿಬಾನಿಗಳ ಉಪಟಳ ಹೆಚ್ಚಾಗಿದ್ದು, ತಾಲಿಬಾನ್ ಶಿಬಿರಗಳನ್ನು ಧ್ವಂಸಗೈದಿರುವ ಸೇನಾಪಡೆಗಳು ಉತ್ತರ ಭಾಗವನ್ನು ವಶಕ್ಕೆ ಪಡೆದುಕೊಂಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


