ಈಕ್ವೆಡಾರ್ ಭೂಕಂಪ: 413ಕ್ಕೆ ಏರಿದ ಮೃತರ ಸಂಖ್ಯೆ
ವಾಯುವ್ಯ ದಕ್ಷಿಣ ಅಮೆರಿಕಾದ ಈಕ್ವೆಡಾರ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 413ಕ್ಕೆ ಏರಿಕೆಯಾಗಿದೆ...

ಕ್ವಿಟೋ: ವಾಯುವ್ಯ ದಕ್ಷಿಣ ಅಮೆರಿಕಾದ ಈಕ್ವೆಡಾರ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 413ಕ್ಕೆ ಏರಿಕೆಯಾಗಿದೆ.
ಈಕ್ವೆಡಾರ್ ನಲ್ಲಿ ಶನಿವಾರ 7.8 ತೀವ್ರತೆಯಲ್ಲಿ ಭೂಮಿ ಕಂಪಿಸಿದ್ದು, ಭೂಕಂಪನದಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿವೆ. ರಾಷ್ಟ್ರೀಯ ಹೆದ್ದಾರಿಗಳು ಹಾನಿಗೊಳಗಾಗಿದ್ದು, ಸಾವಿರಾರು ಕಟ್ಟಡಗಳು ನೆಲಕ್ಕುರುಳಿವೆ. ಇನ್ನು ಕಟ್ಟಡಗಳ ಅವಶೇಷಗಳಡಿ ಬದುಕುಳಿದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ರಕ್ಷಣಾ ಕಾರ್ಯಾಚರಣೆಗಾಗಿ 10 ಸಾವಿರ ಯೋಧರು ಮತ್ತು 3500 ಪೊಲೀಸರನ್ನು ನಿಯೋಜಿಸಲಾಗಿದೆ. ಗಾಯಗೊಂಡವರ ಸಂಖ್ಯೆ 2600ಕ್ಕೂ ಹೆಚ್ಚಿದೆ ಎಂದು ಈಕ್ವೆಡಾರ್ನ ರಕ್ಷಣಾ ಸಚಿವಾಲಯ ತಿಳಿಸಿದೆ.
ಭೂಕಂಪದ ನಂತರ ಅದೇ ಪ್ರದೇಶದಲ್ಲಿ 300ಕ್ಕೂ ಹೆಚ್ಚು ಭಾರೀ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ್ದು, ಜನರು ಭಯದಲ್ಲೇ ದಿನ ದೂಡುವಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


