ವಿದೇಶ

ಪಾಕಿಸ್ತಾನದಲ್ಲಿ ಪೊಲಿಯೋ ಕಾರ್ಯಕ್ರಮದ ವೇಳೆ 7 ಪೊಲೀಸ್ ಅಧಿಕಾರಿಗಳ ಹತ್ಯೆ

ಪಾಕಿಸ್ತಾನದ ಕರಾಚಿಯಲ್ಲಿ ಪೊಲಿಯೋ ಕಾರ್ಯಕ್ರಮದ ವೇಳೆ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಬೈಕ್ ನಲ್ಲಿ ಬಂದ ಬಂದೂಕುಧಾರಿಯೊಬ್ಬ ಏಳು ಪೊಲೀಸ್...

ಪಾಕಿಸ್ತಾನದಲ್ಲಿ ಪೊಲಿಯೋ ಕಾರ್ಯಕ್ರಮದ ವೇಳೆ 7 ಪೊಲೀಸ್ ಅಧಿಕಾರಿಗಳ ಹತ್ಯೆ
ಸಾಂದರ್ಭಿಕ ಚಿತ್ರ
Published On :
ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಪೊಲಿಯೋ ಕಾರ್ಯಕ್ರಮದ ವೇಳೆ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಬೈಕ್ ನಲ್ಲಿ ಬಂದ ಬಂದೂಕುಧಾರಿಯೊಬ್ಬ ಏಳು ಪೊಲೀಸ್ ಅಧಿಕಾರಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬುಧವಾರ ನಡೆದಿದೆ.
ಮೃತ ಪೊಲೀಸ್ ಅಧಿಕಾರಿಗಳನ್ನು ಪೊಲಿಯೋ ಲಸಿಕೆ ಕಾರ್ಯಕ್ರಮದ ಭದ್ರತೆಗೆ ನಿಯೋಜಿಸಲಾಗಿತ್ತು. ಕರಾಚಿಯಲ್ಲಿ ನಡೆದ ದಾಳಿಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಲಿಜಾಝ್ ಅವರು ತಿಳಿಸಿದ್ದಾರೆ.
ದಾಳಿಯ ಹಿನ್ನೆಲೆಯಲ್ಲಿ ಪೊಲೀಸ್ ಲಸಿಕೆ ಕಾರ್ಯಕ್ರಮವನ್ನು ರದ್ದುಗೊಳಿಸುವ ಯೋಚನೆ ಇಲ್ಲ ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿ ಫೆರೋಜ್ ಶಾಹ್ ಅವರು ಹೇಳಿದ್ದಾರೆ.
ಪೊಲಿಯೋ ಕಾರ್ಯಕ್ರಮಕ್ಕೆ ನಿಯೋಜಿಸಿದ್ದ ಪೊಲೀಸರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎಂದು ಪ್ರಾಂತಿಯ ಗೃಹ ಸಚಿವ ಸುಹೈಲ್ ಅನ್ವರ್ ಅವರು ಹೇಳಿದ್ದಾರೆ. ಇನ್ನು ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.