ದ್ವಿಪಕ್ಷೀಯ ಮಾತುಕತೆಯಲ್ಲಿ ಪ್ರಗತಿ ಮರೀಚಿಕೆಯಾಗಿಯೆ ಉಳಿಯಿತು: ಪಾಕ್ ಅಧಿಕಾರಿ
ದ್ವಿಪಕ್ಷೀಯ ಮಾತುಕತೆ ನಡೆಸಿದ ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಚೌಧರಿ, ಭಾರತದೊಂದಿಗಿನ ದ್ವಿಪಕ್ಷೀಯ ಮಾತುಕತೆಯಲ್ಲಿ ಯಾವುದೇ ಪ್ರಗತಿ ಇರಲಿಲ್ಲ ಎಂದು ಹೇಳಿದ್ದಾರೆ.

ಇಸ್ಲಾಮಾಬಾದ್: ಏ.26 ರಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್. ಜೈ ಶಂಕರ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಚೌಧರಿ, ಭಾರತದೊಂದಿಗಿನ ದ್ವಿಪಕ್ಷೀಯ ಮಾತುಕತೆಯಲ್ಲಿ ಯಾವುದೇ ಪ್ರಗತಿ ಇರಲಿಲ್ಲ ಎಂದು ಹೇಳಿದ್ದಾರೆ.
ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿಯೊಂದಿಗೆ ಮಾತುಕತೆ ನಡೆಸಿದ ಅಜೀಜ್ ಚೌಧರಿ ಅವರ ಹೇಳಿಕೆಯನ್ನು ಡಾನ್ ಪತ್ರಿಕೆ ವರದಿ ಮಾಡಿದ್ದು, " ವಿದೇಶಾಂಗ ಕಾರ್ಯದರ್ಶಿಗಳ ನಡುವಿನ ಈ ದ್ವಿಪಕ್ಷೀಯ ಮಾತುಕತೆ ಸಮಗ್ರವಾದ ದ್ವಿಪಕ್ಷೀಯ ಮಾತುಕತೆಗೆ ಮುನ್ನುಡಿ ಬರೆಯುವುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆ ಈಡೆರಲಿಲ್ಲ" ಎಂದು ಹೇಳಿರುವುದರ ಬಗ್ಗೆ ವರದಿಯಾಗಿದೆ.
ಸಮಗ್ರ ದ್ವಿಪಕ್ಷೀಯ ಮಾತುಕತೆಗೆ ಪೂರಕವಾಗುವ ನಿಟ್ಟಿನಲ್ಲಿ ಈ ಮಾತುಕತೆ ಯಶಸ್ವಿಯಾಗಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಚೌಧರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಾಶ್ಮೀರ ವಿವಾದ ಬಗೆಹರಿಸಿಕೊಳ್ಳುವುದು ಹಾಗೂ 2007 ರ ಸಂಜೋತಾ ಎಕ್ಸ್ ಪ್ರೆಸ್ ದಾಳಿ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವುದು ಸೇರಿದಂತೆ ನಿರಂತರ ಮತ್ತು ಪರಿಣಾಮ ಉಂಟುಮಾಡುವಂತಹ ಮಾತುಕತೆಗೆ ಪಾಕ್ ಒತ್ತು ನೀಡಿತ್ತು. ಆದರೆ ಸಮಗ್ರ ಮಾತುಕತೆಗೆ ಪೂರಕವಾಗುವಂತೆ ಯಾವುದೇ ಬೆಳವಣಿಗೆ ನಡೆದಿಲ್ಲ, ಅಲ್ಲದೇ ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ಸಹ ಪಾಕಿಸ್ತಾನದ ಭೇಟಿ ಬಗ್ಗೆ ದಿನಾಂಕ ನಿಗದಿಪಡಿಸಿಲ್ಲ ಎಂದು ಅಜೀಜ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


