ಜಾಗತಿಕ ತಾಪಮಾನ ಏರಿಕೆ ಪರಿಣಾಮ ಸಮುದ್ರ ಜಲದಲ್ಲಿ ಆಕ್ಸಿಜನ್ ಪ್ರಮಾಣ ಕುಸಿತ
ಜಾಗತಿಕ ತಾಪಮಾನ ಏರಿಕೆಯಿಂದಾಗಿ ಸಮುದ್ರಜಲದಲ್ಲಿ ಆಕ್ಸಿಜನ್ ಪ್ರಮಾಣ ಕಡಿಮೆಯಾಗಿದೆ ಎಂದು ಅಧ್ಯಯನ ವರದಿಗಳಿಂದ ತಿಳಿದು...

Published On :
ನ್ಯೂಯಾರ್ಕ್: ಜಾಗತಿಕ ತಾಪಮಾನ ಏರಿಕೆಯಿಂದಾಗಿ ಸಮುದ್ರಜಲದಲ್ಲಿ ಆಕ್ಸಿಜನ್ ಪ್ರಮಾಣ ಕಡಿಮೆಯಾಗಿದೆ ಎಂದು ಅಧ್ಯಯನ ವರದಿಗಳಿಂದ ತಿಳಿದು ಬಂದಿದೆ.
ಜಗತ್ತಿನ ಹಲವು ಪ್ರದೇಶಗಳಲ್ಲಿ ಈ ರೀತಿಯ ಪರಿಸ್ಥಿತಿ ಎದುರಾಗಿದೆ ಎಂದು ಅಮೆರಿಕದ ನ್ಯಾಷನಲ್ ಸೆಂಟರ್ ಫಾರ್ ಅಟಮೋಸ್ಪಿಯರಿಕ್ ಅಧ್ಯಯನ ತಂಡದ ತಜ್ಞರು ಹೇಳಿದ್ದಾರೆ.
ಹೀಗೆ ಮುಂದುವರಿದರೆ 2030- 2040ರ ವೇಳೆಗೆ ಇದು ಇನ್ನೂ ಹಲವು ಸ್ತರಗಳಿಗೆ ವ್ಯಾಪಿಸುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಸಮುದ್ರ ಜಲದಲ್ಲಿ ಆಕ್ಸಿಜನ್‌ನ ಪ್ರಮಾಣ ಕಡಿಮೆಯಾದರೆ ಅಲ್ಲಿರುವ ಮೀನುಗಳು ಮತ್ತು ಇನ್ನಿತರ ಸಮುದ್ರ ಜೀವಿಗಳ ವಿನಾಶಕ್ಕೆ ಇದು ಕಾರಣವಾಗುತ್ತದೆ. ಆದ್ದರಿಂದ ಜಾಗತಿಕ ತಾಪಮಾನ ಏರಿಕೆ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಅಧ್ಯಯನ ತಂಡದ ನಾಯಕ ಮಾಥ್ಯೂ ಲಾಂಗ್ ಹೇಳಿದ್ದಾರೆ.
ಸಮುದ್ರ ಜಲದಲ್ಲಿರುವ ಆಕ್ಸಿಜನ್‌ನ ಪ್ರಮಾಣವು ಸಮುದ್ರದ ಮೇಲ್ಭಾಗದಲ್ಲಿರುವ ಉಷ್ಣತೆ ಮತ್ತು ಗಾಳಿಯನ್ನು ಅವಲಂಬಿಸಿರುತ್ತದೆ. ಹವಾಮಾನದಲ್ಲಾಗುವ ಬದಲಾವಣೆಗಳು ಸಮುದ್ರದಲ್ಲಿನ ಆಕ್ಸಿಜನ್‌ನ ಏರಿಳಿತಕ್ಕೆ ಕಾರಣವಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


