ವಿದೇಶ

ಚೀನಾವನ್ನು ನಿಯಂತ್ರಿಸಲು ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧ ಬಲಗೊಳಿಸಿ: ಒಬಾಮ ಆಡಳಿತಕ್ಕೆ ಸಲಹೆ

ವಿಸ್ತರಣಾವಾದ ನೀತಿಯಿಂದ ದಕ್ಷಿಣ ಏಷ್ಯಾದಲ್ಲಿ ಪ್ರಾಬಲ್ಯ ಮೆರೆಯುತ್ತಿರುವ ಚೀನಾವನ್ನು ನಿಯಂತ್ರಿಸಲು ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧ ಬಲಗೊಳಿಸಿ...

ಚೀನಾವನ್ನು ನಿಯಂತ್ರಿಸಲು ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧ ಬಲಗೊಳಿಸಿ: ಒಬಾಮ ಆಡಳಿತಕ್ಕೆ ಸಲಹೆ
ಬರಾಕ್ ಒಬಾಮ-ನರೇಂದ್ರ ಮೋದಿ
Published On :

ವಾಷಿಂಗ್ ಟನ್: ವಿಸ್ತರಣಾವಾದ ನೀತಿಯಿಂದ ದಕ್ಷಿಣ ಏಷ್ಯಾದಲ್ಲಿ ಪ್ರಾಬಲ್ಯ ಮೆರೆಯುತ್ತಿರುವ ಚೀನಾವನ್ನು ನಿಯಂತ್ರಿಸಲು ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧ ಬಲಗೊಳಿಸಿ ಎಂದು ಅಮೆರಿಕದ ಸಂಸದರೊಬ್ಬರು ಅಧ್ಯಕ್ಷ ಬರಾಕ್ ಒಬಾಮ ಅವರ  ಆಡಳಿತಕ್ಕೆ ಸಲಹೆ ನೀಡಿದ್ದಾರೆ.
ಏಷ್ಯಾದಲ್ಲಿ ಚೀನಾ ಪ್ರಾಬಲ್ಯ ಹೆಚ್ಚುತ್ತಿರುವುದು ಅಮೆರಿಕಾಗೆ ಆತಂಕಕಾರಿ ಬೆಳೆವಣಿಗೆಯಾಗಿದ್ದು, ಚೀನಾವನ್ನು ಭಾರತದ ಮೂಲಕ ಮಾತ್ರ ನಿಯಂತ್ರಿಸಲು ಸಾಧ್ಯ ಎಂದು ಹೌಸ್ ಫಾರಿನ್ ಅಫೇರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ನ್ಯೂಯಾರ್ಕ್ ನ ಅಮೆರಿಕ ಸಂಸದ ಎಲಿಯಟ್ ಏಂಜಲ್ ಹೇಳಿದ್ದಾರೆ.
ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾಗಿರುವ ಭಾರತ ಅಮೆರಿಕಾದ ಏಷ್ಯಾ ನೀತಿಗಳಲ್ಲಿ ಅವಿಭಾಜ್ಯ ಅಂಗವಾಗಬೇಕು ಎಂದು ಎಲಿಯಟ್ ಏಂಜಲ್ ಅಭಿಪ್ರಾಯಪಟ್ಟಿದ್ದಾರೆ. ಕಡಲ ತೀರದ ವಿಷಯಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಭಾರತ ವಿಶ್ವದ ಮೂರನೇ ಅತಿ ದೊಡ್ಡ ಅರ್ಥಿಕತೆಯಾಗಿದ್ದು ಪೂರ್ವ ಏಷ್ಯಾದಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಆದ್ದರಿಂದ ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧ ಬಲಗೊಳಿಸಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.