ವಿದೇಶ

ಮೇಕ್ ಇನ್ ಇಂಡಿಯಾದೊಂದಿಗೆ ಕೈ ಜೋಡಿಸಲು ನ್ಯೂಜಿಲ್ಯಾಂಡ್ ಗೆ ಕರೆ ನೀಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಮೇಕ್ ಇನ್ ಇಂಡಿಯಾದೊಂದಿಗೆ ಕೈ ಜೋಡಿಸುವಂತೆ ಕರೆ ನೀಡಿದ್ದಾರೆ.

ಮೇಕ್ ಇನ್ ಇಂಡಿಯಾದೊಂದಿಗೆ ಕೈ ಜೋಡಿಸಲು ನ್ಯೂಜಿಲ್ಯಾಂಡ್ ಗೆ ಕರೆ ನೀಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ನ್ಯೂ ಜಿಲ್ಯಾಂಡ್ ಪ್ರವಾಸದಲ್ಲಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
Published On :

ಆಕ್ಲೆಂಡ್: ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಮೇಕ್ ಇನ್ ಇಂಡಿಯಾದೊಂದಿಗೆ ಕೈ ಜೋಡಿಸುವಂತೆ ಕರೆ ನೀಡಿದ್ದಾರೆ.

ನ್ಯೂಜಿಲ್ಯಾಂಡ್ ನ ಗೌರ್ನರ್ ಆಯೋಜಿಸಿದ್ದ  ಔತಣಕೂಟದಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಣಬ್ ಮುಖರ್ಜಿ "ಡೇರಿ ಉದ್ಯಮ, ಆಹಾರ ಸಂಸ್ಕರಣೆ, ಸಂವಹನ ಹಾಗೂ ಮಾಹಿತಿ ತಂತ್ರಜ್ಞಾನದ ವಿಷಯದಲ್ಲಿ ನ್ಯೂಜಿಲ್ಯಾಂಡ್ ಅದ್ಭುತ ಪ್ರಗತಿ ಸಾಧಿಸಿದೆ, ಈ ಸಾಲಿಗೆ ಆರೋಗ್ಯ ಸೇವೆ, ವಿಪತ್ತು ನಿರ್ವಹಣೆ ಕ್ಷೆತ್ರಗಳೂ ಸೇರಿವೆ ಎಂದು ಹೇಳಿದ್ದಾರೆ.

ನ್ಯೂಜಿಲ್ಯಾಂಡ್ ಪ್ರಗತಿ ಸಾಧಿಸಿರುವ ಕ್ಷೇತ್ರಗಳಲ್ಲಿ ನಾವು ದ್ವಿಪಕ್ಷೀಯ ಸಂಬಂಧವನ್ನು ಉತ್ತಮಗೊಳಿಸಿ, ಹೊಸ ಮತ್ತು ನವೀನ ಮಾದರಿಯ ತಂತ್ರಜ್ಞಾವನ್ನು ಅಭಿವೃದ್ಧಿಪಡಿಸಲು ಉತ್ಸುಕರಾಗಿದ್ದೇವೆ ಎಂದು  ಪ್ರಣಬ್ ಮುಖರ್ಜಿ ಹೇಳಿದ್ದಾರೆ. ಸಮಾನ ಆಸಕ್ತಿ ವಿಷಯಗಳಲ್ಲಿ ನ್ಯೂಜಿಲ್ಯಾಂಡ್ ನೊಂದಿಗೆ ಹೊಸ ಪಾಲುದಾರಿಕೆಯನ್ನು ಎದುರುನೋಡುತ್ತಿddu ಇಲ್ಲಿನ ಉದ್ಯಮಿಗಳು ಮೇಕ್ ಇನ್ ಇಂಡಿಯಾ ಯೋಜನೆಯೊಂದಿಗೆ ಕೈ ಜೋಡಿಸಬಹುದೆಂದು ಕರೆ ನೀಡಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.