ವಿದೇಶ

ಲಾಸ್ ಏಂಜಲೀಸ್ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳಿಂದ ಶಾರುಖ್ ಖಾನ್ ತಪಾಸಣೆ

ಅಮೆರಿಕಾದ ಲಾಸ್ ಏಂಜಲೀಸ್ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ರನ್ನು ಇಮಿಗ್ರೇಶನ್ ಅಧಿಕಾರಿಗಳು ತಡೆದು ತಪಾಸಣೆ ನಡೆಸಿದ್ದಾರೆ...

ಲಾಸ್ ಏಂಜಲೀಸ್ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳಿಂದ ಶಾರುಖ್ ಖಾನ್ ತಪಾಸಣೆ
ಶಾರುಖ್ ಖಾನ್
Published On :

ಲಾಸ್ ಏಂಜಲೀಸ್: ಅಮೆರಿಕಾದ ಲಾಸ್ ಏಂಜಲೀಸ್ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ರನ್ನು ಇಮಿಗ್ರೇಶನ್ ಅಧಿಕಾರಿಗಳು ತಡೆದು ತಪಾಸಣೆ ನಡೆಸಿದ್ದಾರೆ.

ಅಮೆರಿಕನ್ ಅಧಿಕಾರಿಗಳು ತಪಾಸಣೆಯ ನೆಪದಲ್ಲಿ ಶಾರುಖ್ ಖಾನ್ ರನ್ನು ವಶಕ್ಕೆ ಪಡೆಯುತ್ತಿರುವುದು ಇದು ಎರಡನೇ ಭಾರಿ. ಇದಕ್ಕೂ ಮುನ್ನ 2012ರ ಏಪ್ರಿಲ್ ನಲ್ಲಿ ನ್ಯೂಯಾರ್ಕ್ ವಿಮಾನ ನಿಲ್ದಾಣದಲ್ಲಿ ಗಂಟೆಗಳ ಕಾಲ ಅವರನ್ನು ತಪಾಸಣೆ ನಡೆಸಿತ್ತು.

ಈ ಬಗ್ಗೆ ಟ್ವೀಟ್ ಮಾಡಿರುವ ಶಾರುಖ್ ಖಾನ್ ಭದ್ರತೆ ಹಾಗೂ ಸುರಕ್ಷತೆ ನಿಯಮಗಳನ್ನು ನಾನು ಗೌರವಿಸುತ್ತೇನೆ. ಆದರೆ ಪದೇ ಪದೇ ಅಮೆರಿಕ ಈ ರೀತಿ ನನ್ನನ್ನು ವಿನಾಕಾರಣ ತಪಾಸಣೆ ನಡೆಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ಕಾಯುವಿಕೆ ಅವಧಿಯಲ್ಲಿ ಕೆಲವು ಸುಂದರವಾದ ಪೊಕೆಮಾನ್ ಗಳನ್ನು ವಶಕ್ಕೆ ಪಡೆದಿರುವುದಾಗಿ ಹಾಸ್ಯಾತ್ಮಕವಾಗಿ ಟ್ವೀಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.