ಉಗ್ರ ಹಫೀಜ್ ಸಯೀದ್ ಮೇಲೆ ಪಾಕಿಸ್ತಾನ ನಿಜಕ್ಕೂ ನಿರ್ಬಂದ ಹೇರಿದೆಯಾ?
ಪದೇ ಪದೇ ಮಾಧ್ಯಮಗಳ ಮುಂದೆ ಭಾರತದ ವಿರುದ್ಧ ಬಡಬಡಾಯಿಸುತ್ತಿರುವ 26/11ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಮತ್ತು ಜಮಾತ್ ಉದ್ ದವಾ ಉಗ್ರ...

Published On :
ಲಾಹೋರ್: ಪದೇ ಪದೇ ಮಾಧ್ಯಮಗಳ ಮುಂದೆ ಭಾರತದ ವಿರುದ್ಧ ಬಡಬಡಾಯಿಸುತ್ತಿರುವ 26/11ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಮತ್ತು ಜಮಾತ್ ಉದ್ ದವಾ ಉಗ್ರ ಸಂಘಟನೆಯ ಅಧ್ಯಕ್ಷ ಹಫೀಜ್ ಸಯೀದ್ ಮೇಲಿನ ಮಾಧ್ಯಮ ನಿರ್ಬಂಧವನ್ನು ಪಾಕಿಸ್ತಾನ ಸರ್ಕಾರ ಹಿಂಪಡೆದಂತೆ ಕಾಣಿಸುತ್ತಿದೆ.
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಪ್ರಾರಂಭವಾದ ದಿನದಿಂದಲೂ ಹಫೀಜ್ ಸಯೀದ್ ಪಾಕಿಸ್ತಾನದ ಖಾಸಗಿ ಟಿವಿ ವಾಹಿನಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾನೆ. ಹಫೀಜ್ ಕಾಶ್ಮೀರ ಸಂಬಂಧ ಭಾರತ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದು, ಕಾಶ್ಮೀರ ಪ್ರತ್ಯೇಕತಾವಾದಿಗಳ ಪರವಾಗಿ ಮಾತನಾಡುತ್ತಿದ್ದಾನೆ.
ಕಳೆದ ವರ್ಷ ನವೆಂಬರ್ ನಲ್ಲಿ ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮಗಳ ನಿಯಂತ್ರಣ ಪ್ರಾಧಿಕಾರ ಹಫೀಜ್ ಸಯೀದ್ ಮತ್ತು ಜಮಾತ್ ಉದ್ ದವಾ ಸಂಘಟನೆಗೆ ಸೇರಿದ ಕಾರ್ಯಕ್ರಮಗಳ ವರದಿ ಮಾಡುವುದನ್ನು ನಿಷೇಧಿಸಿತ್ತು. ಆದರೆ ಕಳೆದ ಒಂದು ತಿಂಗಳಿನಿಂದ ಹಫೀಜ್ ಎಲ್ಲಾ ಟಿವಿ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರೂ ಪ್ರಾಧಿಕಾರ ಮಾತ್ರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ.
ನಿಷೇಧಿತ ಉಗ್ರ ಸಂಘಟನೆ ಜಮಾತ್ ಉದ್ ದವಾವನ್ನು ಪಾಕಿಸ್ತಾನದಲ್ಲಿ ನಿಷೇಧಿಸಲಾಗಿದ್ದು, ವಿಶ್ವಸಂಸ್ಥೆ ಇದೊಂದು ಉಗ್ರ ಸಂಘಟನೆ ಎಂದು ಘೋಷಿಸಿದೆ. ಇನ್ನು ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ನನ್ನು ಓರ್ವ ಮೋಸ್ಟ್ ವಾಂಟೆಡ್ ಉಗ್ರ ಎಂದು ಅಮೆರಿಕ ಘೋಷಿಸಿದ್ದು ಆತನ ತಲೆಗೆ ಒಂದು ಕೋಟಿ ಡಾಲರ್ ಬಹಮಾನ ಸಹ ಘೋಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


