ಪ್ರಧಾನಿ ಮೋದಿ ಹೇಳಿಕೆ ದ್ವಿಪಕ್ಷೀಯ ಮಾತುಕತೆಗೆ ಸಹಕಾರಿಯಲ್ಲ: ಪಾಕಿಸ್ತಾನ ಪತ್ರಿಕೆ
ಸ್ವಾತಂತ್ರ್ಯ ದಿನಾಚರಣೆಯ ತಮ್ಮ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ತಾನದ ಬಗ್ಗೆ ಪ್ರಸ್ತಾಪಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ...

ಇಸ್ಲಾಮಾಬಾದ್: ಸ್ವಾತಂತ್ರ್ಯ ದಿನಾಚರಣೆಯ ತಮ್ಮ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ತಾನದ ಬಗ್ಗೆ ಪ್ರಸ್ತಾಪಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ, ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ದ್ವಿಪಕ್ಷೀಯ ಮಾತುಕತೆಗೆ ಸಹಕಾರಿಯಾಗುವುದಿಲ್ಲ ಎಂದು ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಅನಗತ್ಯವಾಗಿ ಬಲೂಚಿಸ್ತಾನ, ಗಿಲ್ಗಿಟ್ ಬಾಲ್ಟಿಸ್ತಾನದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಆದರೆ ಇದು ಪಾಕ್- ಭಾರತ ದ್ವಿಪಕ್ಷೀಯ ಮಾತುಕತೆಗೆ ಇದು ಯಾವುದೇ ರೀತಿಯಲ್ಲೂ ಸಹಕಾರಿಯಾಗುವುದಿಲ್ಲ ಎಂದು ಪಾಕಿಸ್ತಾನ ಪತ್ರಿಕೆ ಡಾನ್ ತಿಳಿಸಿದೆ.
ಕಾಶ್ಮೀರ ವಿಷಯದ ಚರ್ಚೆಗೆ ಪಾಕಿಸ್ತಾನ ನೀಡಿರುವ ಆಹ್ವಾನಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡುವಂತೆ ಪಾಕಿಸ್ತಾನ ಭಾರತಕ್ಕೆ ಸಲಹೆ ನೀಡಿದ್ದು, ಕಾಶ್ಮೀರ ವಿವಾದದ ಬಗ್ಗೆ ಉಭಯ ರಾಷ್ಟ್ರಗಳೂ ಮುಕ್ತ ಮಾತುಕತೆ ನಡೆಸಬೇಕು ಎಂದು ಡಾನ್ ಅಭಿಪ್ರಾಯಪಟ್ಟಿದೆ.
ಪಾಕಿಸ್ತಾನದ ಆಹ್ವಾನಕ್ಕೆ ಪ್ರತಿಕ್ರಿಯೆ ನೀಡಿದ್ದ ಭಾರತ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಎಸ್ ಜೈಶಂಕರ್, ಕಾಶ್ಮೀರ ವಿಚಾರವನ್ನು ಚರ್ಚಿಸಲು ಭಾರತ ಸಿದ್ಧವಿಲ್ಲ, ಆದರೆ ಭಯೋತ್ಪಾದನೆ ಚರ್ಚೆಗೆ ಭಾರತ ಸಿದ್ಧವಿದೆ ಎಂದು ಹೇಳಿದ್ದರು, ಈ ಬೆನ್ನಲ್ಲೇ ಲೇಖನ ಪ್ರಕಟಿಸಿರುವ ಪಾಕಿಸ್ತಾನದ ಪತ್ರಿಕೆ ಡಾನ್, ಭಾರತ-ಪಾಕಿಸ್ತಾನದ ಸ್ಥಿತಿ ವಿಷಮವಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


