ವಿದೇಶ

ಕಾಶ್ಮೀರ ಪರಿಸ್ಥಿತಿ ಬಗ್ಗೆ ಬಾನ್ ಕಿ ಮೂನ್ ಕಳವಳ, ಮಾತುಕತೆಗೆ ಆಹ್ವಾನ: ಪಾಕ್

ಕಾಶ್ಮೀರ ಹಿಂಸಾಚಾರದ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದು...

ಕಾಶ್ಮೀರ ಪರಿಸ್ಥಿತಿ ಬಗ್ಗೆ ಬಾನ್ ಕಿ ಮೂನ್ ಕಳವಳ, ಮಾತುಕತೆಗೆ ಆಹ್ವಾನ: ಪಾಕ್
ಬಾನ್ ಕಿ ಮೂನ್
Published On :
ಇಸ್ಲಾಮಾಬಾದ್: ಕಾಶ್ಮೀರ ಹಿಂಸಾಚಾರದ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದು, ಸಮಸ್ಯೆ ಪರಿಹಾರಕ್ಕೆ ಆಹ್ವಾನ ನೀಡಿರುವುದಾಗಿ ಶುಕ್ರವಾರ ಪಾಕಿಸ್ತಾನ ಹೇಳಿಕೊಂಡಿದೆ.
ಕಾಶ್ಮೀರದಲ್ಲಿ ಭಾರತೀಯ ಸೇನೆ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಬಗ್ಗೆ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು ವಿಶ್ವಸಂಸ್ಥೆಗೆ ಬರೆದಿದ್ದ ಪತ್ರಕ್ಕೆ ಬಾನ್ ಕಿ ಮೂನ್ ಅವರು ಈ ರೀತಿ ಪ್ರತಿಕ್ರಿಯಿಸಿರುವುದಾಗಿ ಪಾಕ್ ವಿದೇಶಾಂಗ ಕಚೇರಿ ತಿಳಿಸಿದೆ,
ಹಿಂಸಾಚಾರವನ್ನು ತಡೆಯಿರಿ ಎಂದಿರುವ ಬಾನ್ ಕಿ ಮೂನ್, ಜಮ್ಮು ಮತ್ತು ಕಾಶ್ಮೀರ ವಿವಾದ ಇತ್ಯರ್ಥಕ್ಕೆ ಮಾತುಕತೆಗೆ ತಮ್ಮ ಕಚೇರಿಯಲ್ಲಿ ವೇದಿಕೆ ಕಲ್ಪಿಸುವುದಾಗಿ ಮತ್ತೊಮ್ಮೆ ಹೇಳಿರುವುದಾಗಿ ವಿದೇಶಾಂಗ ಕಚೇರಿ ಸ್ಪಷ್ಟಪಡಿಸಿದೆ.
ಭಾರತ - ಪಾಕಿಸ್ತಾನ ಎರಡೂ ರಾಷ್ಟ್ರಗಳು ಮಾತುಕತೆಯ ಮೂಲಕವೇ ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು ಎಂದು ಬಾನ್ ಕಿ ಮೂನ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.