ಸಿರಿಯಾ ವೈಮಾನಿಕ ದಾಳಿಯಲ್ಲಿ ಗಾಯಗೊಂಡು ಅವಶೇಷಗಳಡಿ ಸಿಲುಕಿದ್ದ ಬಾಲಕ ಅಲಿ ಸಾವು
ಸಿರಿಯಾ ಮೇಲಿನ ವೈಮಾನಿಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದ 10 ವರ್ಷದ ಬಾಲಕ ಅಲಿ ಡಖ್ನೀಶ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.

ಡಮಾಸ್ಕಸ್: ಸಿರಿಯಾ ಮೇಲಿನ ವೈಮಾನಿಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದ 10 ವರ್ಷದ ಬಾಲಕ ಅಲಿ ಡಖ್ನೀಶ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.
ಕಳೆದ ಬುಧವಾರ ಸಿರಿಯಾದ ಅಲೆಪ್ಪೋ ನಗರದ ಮೇಲೆ ನಡೆದಿದ್ದ ವಾಯುದಾಳಿಯಲ್ಲಿ ಅಲಿ ಡಖ್ನೀಶ್ ಗಂಭೀರವಾಗಿ ಗಾಯಗೊಂಡಿದ್ದ, ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿದ್ದ ಬಾಲಕ ಅಲಿ ಮತ್ತು ಆತನ ಸಹೋದರ ಒಮ್ರನ್ ಡಖ್ನೀಶ್ ರನ್ನು ರಕ್ಷಣಾ ಕಾರ್ಯಾಚರಣೆಯಲ್ಲಿ ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿ ವೈರಲ್ ಆಗಿತ್ತು. ಬಾಲಕನ ಮತ್ತು ಅಲ್ಲಿನ ದಯನೀಯ ಪರಿಸ್ಥಿತಿಗೆ ಇಡೀ ವಿಶ್ವವೇ ಮರುಗಿ ವಾಯುದಾಳಿಯನ್ನು ಖಂಡಿಸಿದ್ದವು.
ಇದೀಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಒಮ್ರನ್ ಡಖ್ನೀರ್ ಸಹೋದರ ಅಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


