ಭಾರತ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕೆಲಸ ಮಾಡಬಹುದು ಎಂದು ಭಾವಿಸುತ್ತೇವೆ: ಚೀನಾ
ಗಡಿ ಭಾಗದಲ್ಲಿ ಯುದ್ಧ ಸೃಷ್ಟಿಸುವ ಬದಲಾಗಿ ಶಾಂತಿ, ಭದ್ರತೆ, ಸ್ಥಿರತೆಯನ್ನು ಕಾಪಾಡಲು ಭಾರತ ಇನ್ನಷ್ಟು ಉತ್ತಮ ಕೆಲಸಗಳನ್ನು ಮಾಡಬಹುದು...

Published On :
ಬೀಜಿಂಗ್: ಗಡಿ ಭಾಗದಲ್ಲಿ ಯುದ್ಧ ಸೃಷ್ಟಿಸುವ ಬದಲಾಗಿ ಶಾಂತಿ, ಭದ್ರತೆ, ಸ್ಥಿರತೆಯನ್ನು ಕಾಪಾಡಲು ಭಾರತ ಇನ್ನಷ್ಟು ಉತ್ತಮ ಕೆಲಸಗಳನ್ನು ಮಾಡಬಹುದು ಎಂದು ಚೀನಾ ಹೇಳಿದೆ. ಭಾರತ ಮತ್ತು ಚೀನಾ ಗಡಿ ಭಾಗದಲ್ಲಿ ಬ್ರಹ್ಮೋಸ್ ಕ್ಷಿಪಣಿಯನ್ನು ನಿಯೋಜಿಸುವ ಕುರಿತು ದೆಹಲಿ ಯೋಜನೆ ಹಮ್ಮಿಕೊಳ್ಳುತ್ತಿದೆ ಎಂಬ ಸುದ್ದಿ ಕೇಳಿಬಂದಿರುವ ಹಿನ್ನೆಲೆಯಲ್ಲಿ ಚೀನಾ ಈ ಹೇಳಿಕೆ ನೀಡಿದೆ.
ಗಡಿ ಭಾಗದಲ್ಲಿ ಶಾಂತಿ, ಭದ್ರತೆಯನ್ನು ಕಾಪಾಡಲು ಎರಡೂ ದೇಶಗಳು ಸಹಮತಕ್ಕೆ ಬಂದಿವೆ. ಈ ಮಾತಿಗೆ ಬದ್ಧವಾಗಿ ಭಾರತದ ಕಡೆಯಿಂದ ಹೆಚ್ಚಿನ ಸಕಾರಾತ್ಮಕ ಪ್ರತಿಕ್ರಿಯೆ ಸಿಗಬಹುದೆಂಬ ಆಶಾಭಾವನೆ ನಮ್ಮಲ್ಲಿದೆ ಎಂದು ಚೀನಾದ ರಕ್ಷಣಾ ಸಚಿವಾಲಯ ವಕ್ತಾರ ಕರ್ನಲ್ ವು ಕ್ವಿಯಾನ್ ತಿಳಿಸಿದ್ದಾರೆ.
ಭಾರತ-ಚೀನಾ ಗಡಿಯಲ್ಲಿ ಸುಧಾರಿತ ನೌಕಾ ಕ್ಷಿಪಣಿಯನ್ನು ನಿಯೋಜಿಸಲು ಭಾರತ ಸರ್ಕಾರ ನಿರ್ಧರಿಸಿರುವುದನ್ನು ಟೀಕಿಸಿ ಪೀಪಲ್ಸ್ ಲಿಬರೇಷನ್ ಆರ್ಮಿ ಡೈಲಿ ನೀಡಿರುವ ಹೇಳಿಕೆಗೆ ಸಂಬಂಧಪಟ್ಟಂತೆ ಕೇಳಲಾದ ಪ್ರಶ್ನೆಗೆ ಸಚಿವಾಲಯದ ವಕ್ತಾರರು ಈ ಪ್ರತಿಕ್ರಿಯೆ ನೀಡಿದ್ದಾರೆ.
ವರದಿಗಳ ಪ್ರಕಾರ, ಕಡಿದಾದ ಡೈವಿಂಗ್ ಸಾಮರ್ಥ್ಯಗಳನ್ನು ಹೊಂದಿದ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ಷಿಪಣಿಗಳನ್ನು ಸೇರಿಸಲು ಭಾರತ ಸರ್ಕಾರ ಅನುಮೋದನೆ ನೀಡಿದ್ದು, ಭಾರತ-ಚೀನಾ ಗಡಿಯ ಪೂರ್ವ ಭಾಗದಲ್ಲಿ ನಿಯೋಜಿಸಲು ನಿರ್ಧರಿಸಿದೆ ಎನ್ನಲಾಗುತ್ತಿದೆ.
ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಯ ಅಧಿಕೃತ ಪ್ರಕಟಣೆಯಾದ ಪಿಎಲ್ಎ ಡೈಲಿ, ಭಾರತದ ಈ ನಿರ್ಧಾರಕ್ಕೆ ಪ್ರತಿಯಾಗಿ ಚೀನಾ ಪ್ರತಿತಂತ್ರಗಳನ್ನು ರೂಪಿಸಲಿದೆ ಎಂದು ಎಚ್ಚರಿಕೆ ನೀಡಿದೆ.
ಬ್ರಹ್ಮೋಸ್ ನೌಕಾ ಕ್ಷಿಪಣಿ ಭಾರತ ಮತ್ತು ರಷ್ಯಾ ನಡುವಿನ ಜಂಟಿ ಕಾರ್ಯಾಚರಣೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


