ಇಟಲಿ ಭೂಕಂಪ: ಅವಶೇಷಗಳಡಿ ಸಿಲುಕಿ 18 ಗಂಟೆ ಕಾಲ ಜೀವ ಉಳಿಸಿಕೊಂಡಿದ್ದ ಬಾಲಕಿ ರಕ್ಷಣೆ
ಮಧ್ಯ ಇಟಲಿಯಲ್ಲಿ ಸಂಭವಿಸಿದ ಭೂಕಂಪನದಲ್ಲಿ ಧರೆಗುರುಳಿದ್ದ ಕಟ್ಟಡಗಳ ಅವಶೇಷಗಳಡಿಯಲ್ಲಿ ಸಿಲುಕಿದ್ದ 10 ವರ್ಷದ ಬಾಲಕಿಯನ್ನು 18 ಗಂಟೆಗಳ ರಕ್ಷಣಾ...

Published On :
ಅಮೆಟ್ರೈಸ್: ಮಧ್ಯ ಇಟಲಿಯಲ್ಲಿ ಸಂಭವಿಸಿದ ಭೂಕಂಪನದಲ್ಲಿ ಧರೆಗುರುಳಿದ್ದ ಕಟ್ಟಡಗಳ ಅವಶೇಷಗಳಡಿಯಲ್ಲಿ ಸಿಲುಕಿದ್ದ 10 ವರ್ಷದ ಬಾಲಕಿಯನ್ನು 18 ಗಂಟೆಗಳ ರಕ್ಷಣಾ ಕಾರ್ಯಾಚರಣೆ ಬಳಿಕ ರಕ್ಷಿಸಲಾಗಿದೆ.
ಪೆಸ್ಕೆರಾ ಡೆಲ್ ಟ್ರೊಂಟೊ ಪಟ್ಟಣದಲ್ಲಿ ರಕ್ಷಣಾ ಕಾರ್ಯಾಚರಣೆ ವೇಳೆ ಭದ್ರತಾ ದಳದ ಸಿಬ್ಬಂದಿಗೆ ಮಗು ಅಳುತ್ತಿರುವ ಧ್ವನಿ ಕೇಳಿಸಿದ್ದು ತಕ್ಷಣ ಆಕೆ ಇರುವ ಸ್ಥಳ ಗುರುತಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಇಟಲಿಯಲ್ಲಿ ಕಳೆದ ಬುಧವಾರ ನಡೆದ 6.2 ತೀವ್ರತೆಯ ಭೂಕಂಪದಲ್ಲಿ ಸಾಕಷ್ಟು ಹಾನಿ ಸಂಭವಿಸಿದ್ದು, 250ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಇನ್ನು ಹಲವು ಕಟ್ಟಡಗಳು ಕುಸಿದ್ದು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


