ಎನ್ಎಸ್ ಜಿ, ಭದ್ರತಾ ಮಂಡಳಿ ಸದಸ್ಯತ್ವಕ್ಕೆ ಅಮೆರಿಕ ಬೆಂಬಲ ಕೋರಿದ ಭಾರತ
ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯತ್ವ ಪಡೆಯುವ ವಿಚಾರದಲ್ಲಿ ಭಾರತ ಅಮೆರಿಕದೊಂದಿಗೆ ನಿಕಟ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್...

ನವದೆಹಲಿ: ಪರಮಾಣು ಪೂರೈಕೆದಾರ ಸಮೂಹಕ್ಕೆ ಸೇರ್ಪಡೆಗೊಳ್ಳುವುದಕ್ಕೆ ಹಾಗೂ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯತ್ವ ಪಡೆಯುವ ವಿಚಾರದಲ್ಲಿ ಭಾರತ ಅಮೆರಿಕದೊಂದಿಗೆ ನಿಕಟ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುಷ್ಮಾ ಸ್ವರಾಜ್, ಅಮೆರಿಕ ಕಾರ್ಯದರ್ಶಿ ಜಾನ್ ಕೆರ್ರಿ ಅವರೊಂದಿಗೆ ಮಾತನಾಡಿದ್ದು ಎನ್ ಎಸ್ ಜಿ ಹಾಗೂ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಸದಸ್ಯತ್ವ ಪಡೆಯುವ ವಿಚಾರದಲ್ಲಿ ಅಮೆರಿಕದ ಬೆಂಬಲವನ್ನು ಕೋರಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ಕೆಲವು ತಿಂಗಳುಗಳ ಹಿಂದೆ ಭಾರತ ಎನ್ ಎಸ್ ಜಿ ಸದಸ್ಯತ್ವಕ್ಕಾಗಿ ಯತ್ನಿಸಿತ್ತಾದರೂ ಅದು ಫಲಿಸಿರಲಿಲ್ಲ. ಅಮೆರಿಕದೊಂದಿಗಿನ ರಕ್ಷಣಾ ಸಹಕಾರವನ್ನು ಭಾರತ ಮುಂದಿನ ಹಂತಕ್ಕೆ ಕೊಂಡೊಯ್ಯಲು ಉತ್ಸುಕವಾಗಿದೆ ಎಂದು ತಿಳಿಸಿದ್ದಾರೆ. ಅಮೆರಿಕ- ಭಾರತ ಭಯೋತ್ಪಾದನೆ ನಿಗ್ರಹ ವಿಷಯದಲ್ಲಿ ಹೆಚ್ಚಿನ ಸಹಕಾರಕ್ಕೆ ಒಪ್ಪಂದ ಮಾಡಿಕೊಂಡಿದ್ದು, ದ್ವಿಪಕ್ಷೀಯ ಒಪ್ಪಂದದ ಮಹತ್ವದ ಭಾಗವಾಗಿದೆ ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


