ಪಾಕಿಸ್ತಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರದಿಂದ ಭಾರತದ ಚಾನಲ್ ಗಳನ್ನು ಪ್ರಸಾರ ಮಾಡುವುದಕ್ಕೆ ನಿರ್ಬಂಧ
ಭಾರತದ ವಾಹಿನಿಗಳಿಂದ ಅಕ್ರಮವಾಗಿ ವಿಷಯಗಳನ್ನು ಪ್ರಕಟಿಸುವ ಪಾಕಿಸ್ತಾನದ ವಾಹಿನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರ ಎಚ್ಚರಿಕೆ

ಇಸ್ಲಾಮಾಬಾದ್: ಭಾರತದ ವಾಹಿನಿಗಳಿಂದ ಅಕ್ರಮವಾಗಿ ವಿಷಯಗಳನ್ನು ಪ್ರಕಟಿಸುವ ಪಾಕಿಸ್ತಾನದ ವಾಹಿನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರ ಎಚ್ಚರಿಕೆ ನೀಡಿದೆ.
ಸಾರ್ವಜನಿಕರ, ಕೆಲವು ಟಿವಿ ಮಾಲೀಕರಿಂದ ದೂರು ಬಂದಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರ ಈ ಎಚ್ಚರಿಕೆ ನೀಡಿದ್ದು, ಪ್ರಸಾರವಾಗುವ ಇಡೀ ಕಾರ್ಯಕ್ರಮ ಪ್ರಸಾರವಾಗುವ ಶೇ.6 ಕ್ಕಿಂತ ಕಡಿಮೆ ಅವಧಿಯಲ್ಲಿ ಭಾರತದ ದೂರದರ್ಶನ ವಾಹಿನಿಗಳನ್ನು ಪ್ರಸಾರ ಮಾಡಲು ಅನುಮತಿ ನೀಡಿದೆ.
ಈ ಬಗ್ಗೆ ಮಾತನಾಡಿರುವ ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರದ ಮುಖ್ಯಸ್ಥ ಅಬ್ಸಆರ್ ಆಲಂ, ನಿಯಂತ್ರಣ ಪ್ರಾಧಿಕಾರದ ಆದೇಶವನ್ನು ಉಲ್ಲಂಘನೆ ಮಾಡಿದ ಚಾನಲ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ವಿದೇಶಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲು ಅನುಮತಿ, ಪರವಾನಗಿ ಪಡೆದಿರುವ ಚಾನಲ್ ಗಳು ಮಾತ್ರ ಭಾರತದ ವಾಹಿನಿಗಳನ್ನು ಪ್ರಸಾರ ಮಾಡಬಹುದಾಗಿದೆ. ಉಳಿದ ಪಾಕಿಸ್ತಾನದ ಚಾನಲ್ ಗಳು ಅಕ್ಟೊಬರ್ 15 ರಿಂದ ಒಟ್ಟಾರೆ ಪ್ರಸಾರ ವೇಳೆಯ ಶೇ.6 ಕ್ಕಿಂತ ಕಡಿಮೆ ಅವಧಿಯಲ್ಲಿ ಭಾರತದ ಚಾನಲ್ ಗಳ ಅಂಶವನ್ನು ಪ್ರಸಾರ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


