ಪಾಕಿಸ್ತಾನದಲ್ಲಿ ಭೀಕರ ಅಗ್ನಿ ಅವಘಡ: 11 ಮಂದಿ ಸಜೀವ ದಹನ
ಪಾಕಿಸ್ತಾನದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದುರಂತದಲ್ಲಿ 11 ಮಂದಿ ಸಜೀವವಾಗಿ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ.

ಕರಾಚಿ: ಪಾಕಿಸ್ತಾನದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದುರಂತದಲ್ಲಿ 11 ಮಂದಿ ಸಜೀವವಾಗಿ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ.
ಪಾಕಿಸ್ತಾನದ ಕರಾಚಿಯ ಶರಾ ಇ ಫೈಸಲ್ ಪ್ರದೇಶದಲ್ಲಿರುವ ಖಾಸಗಿ ತಾರಾ ಹೊಟೆಲ್ ರೀಜೆಂಟ್ ಪ್ಲಾಜಾದಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿ ಇಡೀ ಹೊಟೆಲ್ ಅನ್ನು ಆವರಿಸಿದೆ ಪರಿಣಾಮ ಹೊಟೆಲ್ ನಲ್ಲಿದ್ದ 11 ಮಂದಿ ಸಜೀವ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ಘಟನೆಯಲ್ಲಿ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕರಾಚಿಯ ಜಿನ್ನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಹಲವರು ವಿದೇಶಿಗರು ಎಂದು ತಿಳಿದುಬಂದಿದೆ.
ಘಟನಾ ಸ್ಥಳದಲ್ಲಿ 15ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಹಾಗೂ ಸಿಬ್ಬಂದಿಗಳು ಮೊಕ್ಕಾಂ ಹೂಡಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಇನ್ನು ಹೊಟೆಲ್ ನಲ್ಲಿ ಬೆಂಕಿಕಾಣಿಸಿಕೊಳ್ಳುತ್ತಿದ್ದಂತೆಯೇ ಹಲವ ವಿದೇಶಿಗರು ತಮ್ಮತಮ್ಮ ಕೋಣೆಯಲ್ಲಿದ್ದ ಬೆಡ್ ಶೀಟ್ ಗಳನ್ನು ಹಿಡಿದು ಕೊಠಡಿಯ ಕಿಟಕಿಗಳಿಂದ ಕೆಳಗೆ ಧುಮುಕುತ್ತಿರುವ ದೃಶ್ಯ ಪಾಕಿಸ್ತಾನದ ಸುದ್ದಿವಾಹಿನಿಗಳು ಪ್ರಸಾರ ಮಾಡಿವೆ. ಹೊಟೆಲ್ ನ ಅಡುಗೆ ಕೋಣೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಸಮಯ ಕಳೆದಂತೆ ಇಡೀಕಟ್ಟಡವನ್ನು ಬೆಂಕಿ ಆವರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


