ಸೊಲೊಮನ್ ದ್ವೀಪ ಸಮೂಹದಲ್ಲಿ ಭಾರಿ ಭೂಕಂಪನ; ಸುನಾಮಿ ಎಚ್ಚರಿಕೆ
ಆಸ್ಟ್ರೇಲಿಯಾದ ಫೆಸಿಫಿಕ್ ಸಮುದ್ರದ ಸೊಲೊಮನ್ ದ್ವೀಪಸಮೂಹದಲ್ಲಿ ಪ್ರಭಲ ಭೂಕಂಪನ ಸಂಭವಿಸಿದ್ದು, ಹವಮಾನ ಇಲಾಖೆ ಸುನಾಮಿ ಸಂಭವಿಸುವ ಕುರಿತು ಎಚ್ಚರಿಕೆ ರವಾನಿಸಿದೆ.

ಸಿಡ್ನಿ: ಆಸ್ಟ್ರೇಲಿಯಾದ ಫೆಸಿಫಿಕ್ ಸಮುದ್ರದ ಸೊಲೊಮನ್ ದ್ವೀಪಸಮೂಹದಲ್ಲಿ ಪ್ರಭಲ ಭೂಕಂಪನ ಸಂಭವಿಸಿದ್ದು, ಹವಮಾನ ಇಲಾಖೆ ಸುನಾಮಿ ಸಂಭವಿಸುವ ಕುರಿತು ಎಚ್ಚರಿಕೆ ರವಾನಿಸಿದೆ.
ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 7.7ರಷ್ಟು ದಾಖಲಾಗಿದ್ದು, ಕರಾವಳಿಯಲ್ಲಿರುವ ಗ್ರಾಮಸ್ಥರು ಕೂಡಲೇ ಎತ್ತರ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವಂತೆ ಹವಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಬಲ ಭೂಕಂಪನ ಸಂಭವಿಸಿದ ಬೆನ್ನಲ್ಲೇ 6.5 ತೀವ್ರತೆಯ ಕಂಪನಗಳು ಸಂಭವಿಸಿದ್ದು, ಫೆಸಿಫಿಕ್ ಸುನಾಮಿ ಎಚ್ಚರಿಕಾ ಕೇಂದ್ರ ಸುನಾಮಿ ಎಚ್ಚರಿಕೆ ರವಾನಿಸಿದೆ. ಆದರೆ ಈ ವರೆಗೂ ಯಾವುದೇ ಗಂಭೀರ ಹಾನಿಯಾಗಿರುವ ಮಾಹಿತಿಗಳು ಲಭ್ಯವಾಗಿಲ್ಲ.
ಸೊಲೊಮನ್ ದ್ವೀಪಸಮೂಹದ ಪಶ್ಚಿಮ ಕಿರಕಿರಾ ದ್ವೀಪದ ಸುಮಾರು 62 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, ಸೊಲೊಮನ್ ದ್ವೀಪಸಮೂಹದಲ್ಲಿ ವಿದ್ಯುತ್ ಸಂಪರ್ಕ ಬಹುತೇಕ ಕಡಿತಗೊಂಡಿದೆ. ದ್ವೀಪದಲ್ಲಿ ಹಲವು ಕಟ್ಟಡಗಳು ಕುಸಿದಿರುವ ಕುರಿತು ಮಾಹಿತಿ ಲಭ್ಯವಾಗಿದೆಯಾದರೂ, ಅವಘಡದಲ್ಲಿ ಗಾಯಗೊಂಡಿರುವವರ ಕುರಿತು ಈ ವರೆಗೂ ಮಾಹಿತಿ ಲಭ್ಯವಾಗಿಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


