ಅಮೆರಿಕನ್ನರ ಉದ್ಯೋಗ ಆಕ್ರಮಿಸಲು ವಲಸಿಗರಿಗೆ ಅವಕಾಶ ನೀಡುವುದಿಲ್ಲ: ಟ್ರಂಪ್
ಅಮೆರಿಕಾದಲ್ಲಿರುವ ವಿದೇಶಿ ಉದ್ಯೋಗಿಗಳ ಬಗ್ಗೆ ಮತ್ತೆ ಗುಡುಗಿರುವ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕನ್ನರ ಉದ್ಯೋಗಗಳನ್ನು ಕಸಿಯಲು ಹೆಚ್-1 ಬಿ ವೀಸಾ ಪಡೆದವರಿಗೆ ಅವಕಾಶ ನೀಡುವುದಿಲ್ಲ

Published On :
ವಾಷಿಂಗ್ ಟನ್: ಅಮೆರಿಕಾದಲ್ಲಿರುವ ವಿದೇಶಿ ಉದ್ಯೋಗಿಗಳ ಬಗ್ಗೆ ಮತ್ತೆ ಗುಡುಗಿರುವ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕನ್ನರ ಉದ್ಯೋಗಗಳನ್ನು ಕಸಿಯಲು ಹೆಚ್-1 ಬಿ ವೀಸಾ ಪಡೆದವರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಅಮೆರಿಕನ್ನರಿಗಿಂತ ಭಾರತೀಯರು ಹಾಗೂ ಇತರ ವಿದೇಶಿಗರೇ ಹೆಚ್ಚು ಕಾರ್ಯನಿರ್ವಹಿಸುತ್ತಿರುವ ಡಿಸ್ನಿ ವರ್ಲ್ಡ್ ನಂತಹ ಕಂಪನಿಗಳ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಿರುವ ಅಮೆರಿಕಾದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಚ್-1 ವೀಸಾ ಪಡೆದವರಿಂದ ಅಮೆರಿಕಾದವರನ್ನು ರಕ್ಷಿಸಲು ಹೋರಾಡುತ್ತೇವೆ, ಅಧ್ಯಕ್ಷೀಯ ಚುನಾವಣೆಯ ಪ್ರಚಾರದ ವೇಳೆಯಲ್ಲೂ ನಾನು ಅಮೆರಿಕಾದ ಉದ್ಯೋಗಿಗಳೊಂದಿಗೇ ಇದ್ದೆ. ಈ ವರೆಗೂ ಅಮೆರಿಕನ್ನರ ಉದ್ಯೋಗಗಳಿಗೆ ವಿದೇಶಿಗರನ್ನು ಕರೆತರಲಾಗುತ್ತಿತ್ತು. ಆದರೆ ಇನ್ನು ಮುಂದೆ ಹಾಗೆ ಆಗಲು ಬಿಡುವುದಿಲ್ಲ ಎಂದು ಅಮೆರಿಕಾದ ಜನತೆಗೆ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


