ವಿದೇಶ

ಇಸ್ತಾಂಬುಲ್ ನಲ್ಲಿ ಅವಳಿ ಬಾಂಬ್ ಸ್ಫೋಟ: 29 ಸಾವು, 66 ಜನರಿಗೆ ಗಾಯ

ಟರ್ಕಿ ರಾಷ್ಟ್ರದ ಸೆಂಟ್ರಲ್ ಇಸ್ತಾಂಬುಲ್ ನಲ್ಲಿ ಅವಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಪರಿಣಾಮ 29 ಮಂದಿ ಸಾವನ್ನಪ್ಪಿ 166ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶನಿವಾರ...

ಇಸ್ತಾಂಬುಲ್ ನಲ್ಲಿ ಅವಳಿ ಬಾಂಬ್ ಸ್ಫೋಟ: 29 ಸಾವು, 66 ಜನರಿಗೆ ಗಾಯ
ಇಸ್ತಾಂಬುಲ್ ನಲ್ಲಿ ಅವಳಿ ಬಾಂಬ್ ಸ್ಫೋಟ: 29 ಸಾವು, 66 ಜನರಿಗೆ ಗಾಯ
Published On :

ಇಸ್ತಾಂಬುಲ್: ಟರ್ಕಿ ರಾಷ್ಟ್ರದ ಸೆಂಟ್ರಲ್ ಇಸ್ತಾಂಬುಲ್ ನಲ್ಲಿ ಅವಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಪರಿಣಾಮ 29 ಮಂದಿ ಸಾವನ್ನಪ್ಪಿ 166ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

ಟರ್ಕಿಯ ಮೆಕ್ಕಾ ಪಾಕ್ ಬಳಿ ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಮುಸುಕಾಧಾರಿಯಾಗಿ ಬಂದ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಆತ್ಮಾಹುತಿ ಬಾಂಬ್ ಸ್ಫೋಟಿಸಿದ್ದ, ಪರಿಣಾಮ ಸ್ಥಳದಲ್ಲಿದ್ದ 9 ಮಂದಿ ಪೊಲೀಸರು ಸೇರಿದಂತೆ 29 ಮಂದಿ ಸಾವನ್ನಪ್ಪಿದ್ದರು ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.

ಘಟನೆ ಸಂಬಂಧ ಈಗಾಗಲೇ 10 ಮಂದಿಯನ್ನು ಬಂಧನಕ್ಕೊಳಪಡಲಾಗಿದೆ ಎಂದು ಅಲ್ಲಿನ ಸರ್ಕಾರ ಹೇಳಿಕೊಂಡಿದ್ದು, ಬಾಂಬ್ ಸ್ಫೋಟದ ಹೊಣೆಯನ್ನು ಈ ವರೆಗೂ ಯಾವುದೇ ಉಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲ. ಆದರೆ, ಇಸಿಸ್ ಉಗ್ರ ಸಂಘಟನೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.