ವಿದೇಶ

ವಿಪಕ್ಷಗಳ ಪ್ರಶ್ನೆಗಳನ್ನು ಎದುರಿಸಲು ಮೋದಿ ಭಯ ಪಡುತ್ತಿದ್ದಾರೆ: ಕಾಂಗ್ರೆಸ್

ನೋಟು ನಿಷೇಧ ಕುರಿತಂತೆ ಮಾತನಾಡಲು ಸಾರ್ವಜನಿಕ ಸಭೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು,ಸಂಸತ್ತಿಗೆ ಬಂದು ವಿಪಕ್ಷಗಳ ಪ್ರಶ್ನೆಗಳನ್ನು ಎದುರಿಸಲು ಭಯ ಪಡುತ್ತಿದ್ದಾರೆಂದು...

ವಿಪಕ್ಷಗಳ ಪ್ರಶ್ನೆಗಳನ್ನು ಎದುರಿಸಲು ಮೋದಿ ಭಯ ಪಡುತ್ತಿದ್ದಾರೆ: ಕಾಂಗ್ರೆಸ್
ಕಾಂಗ್ರೆಸ್ ನಾಯಕ ಅಹ್ಮದ್
Published On :

ನವದೆಹಲಿ: ನೋಟು ನಿಷೇಧ ಕುರಿತಂತೆ ಮಾತನಾಡಲು ಸಾರ್ವಜನಿಕ ಸಭೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು,ಸಂಸತ್ತಿಗೆ ಬಂದು ವಿಪಕ್ಷಗಳ ಪ್ರಶ್ನೆಗಳನ್ನು ಎದುರಿಸಲು ಭಯ ಪಡುತ್ತಿದ್ದಾರೆಂದು ಕಾಂಗ್ರೆಸ್ ಭಾನುವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಅಹ್ಮದ್ ಅವರು, ನೋಟು ನಿಷೇಧ ಕುರಿತಂತೆ ಪ್ರಧಾನಿ ಮೋದಿಯವರು ಗುಜರಾತ್ ನ ಬನಸ್ಕಾಂತ ಜಿಲ್ಲೆಗಳಂತಹ ಪ್ರದೇಶಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಏಕೆಂದರೆ, ಆ ಪ್ರದೇಶಗಳಲ್ಲಿ ಸಾಮಾನ್ಯ ಜನರ ಕೈಗಳಲ್ಲಿ ಮೈಕ್ ಇರುವುದಿಲ್ಲ. ಅಲ್ಲದೆ, ಸ್ಥಳದಲ್ಲಿ ಮೋದಿಯವರ ಸುತ್ತಲೂ ಭದ್ರತಾ ಪಡೆಗಳು ಸುತ್ತುವರೆದಿರುತ್ತಾರೆ. ಈ ವೇಳೆ ಸಾಮಾನ್ಯ ಜನರು ಮುಂದೆ ಬಂದು ಚರ್ಚೆ ಮಾಡಲು ಬಿಡುವುದಿಲ್ಲ. ಹೀಗಾಗಿ ಮೋದಿ ಇಂತಹ ಪ್ರದೇಶಗಳನ್ನೇ ಆಯ್ಕೆ ಮಾಡಿಕೊಂಡು ಮಾತನಾಡುತ್ತಾರೆಂದು ಹೇಳಿದ್ದಾರೆ.

ನೋಟು ನಿಷೇಧ ಕುರಿತಂತೆ ಇತರೆ ಪ್ರದೇಶಗಳನ್ನು ಆಯ್ಕೆ ಮಾಡಿಕೊಂಡು ಮಾತನಾಡುತ್ತಿರುವ ಪ್ರಧಾನಿ ಮೋದಿಯವರು ಸಂಸತ್ತಿಗೆ ಬಂದು ಮಾತ್ರ ಮಾತನಾಡುತ್ತಿಲ್ಲ. ವಿರೋಧ ಪಕ್ಷಗಳು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಲು ಮೋದಿಯವರು ಹೆದರುತ್ತಿದ್ದಾರೆಂದು ತಿಳಿಸಿದ್ದಾರೆ.

ಇದೇ ವೇಳೆ ದೇಶದಾದ್ಯಂತ ಕೋಟಿಗಟ್ಟಲೆ ಹೊಸ ನೋಟುಗಳ ವಶ ಪ್ರಕರಣಗಳ ಕುರಿತಂತೆ ಪ್ರಧಾನಿ ಮೋದಿಗೆ ಪ್ರಶ್ನೆ ಹಾಕಿರುವ ಅವರು, ದೇಶದ ಮೂಲೆ ಮೂಲೆಗಳಲ್ಲಿ ಕೋಟಿಗಟ್ಟಲೆ ಹೊಸ ನೋಟುಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಸಾಮಾನ್ಯ ಜನರಿಗೇಕೆ ರು.2000 ನೋಟುಗಳು ಸಿಗುತ್ತಿಲ್ಲ?... ಕಾಳಧನಿಕರು ತಮ್ಮಲ್ಲಿರುವ ಕೋಟಿಗಟ್ಟಲೆ ಹಣವನ್ನು ಭದ್ರ ಮಾಡಿಕೊಳ್ಳುತ್ತಿದ್ದಾರೆ. ನೋಟಿನ ಮೇಲೆ ನಿಷೇಧ ಹೇರಿದ ಬಳಿಕವೂ ಮೊದಲ ಹಂತದಲ್ಲಿ ಕಪ್ಪುಹಣ ಶೇಖರಣೆಯಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.