ಬ್ರಿಟನ್ ನಲ್ಲಿ 6 ಮಂದಿ ಶಂಕಿತ ಉಗ್ರರ ಬಂಧನ
ಪ್ರಮುಖ ಬೆಳವಣಿಗೆಯೊಂದರಲ್ಲಿ ಬ್ರಿಟನ್ ನಾದ್ಯಂತ ದಾಳಿ ನಡೆಸಿದ ಅಧಿಕಾರಿಗಳು ವಿವಿಧ ಪ್ರದೇಶಗಳಲ್ಲಿ ಒಟ್ಟು 6 ಮಂದಿ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಲಂಡನ್: ಪ್ರಮುಖ ಬೆಳವಣಿಗೆಯೊಂದರಲ್ಲಿ ಬ್ರಿಟನ್ ನಾದ್ಯಂತ ದಾಳಿ ನಡೆಸಿದ ಅಧಿಕಾರಿಗಳು ವಿವಿಧ ಪ್ರದೇಶಗಳಲ್ಲಿ ಒಟ್ಟು 6 ಮಂದಿ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಡರ್ಬಿಯಲ್ಲಿ ನಾಲ್ಕು ಮಂದಿ, ಬರ್ಟನ್ ನಲ್ಲಿ ಓರ್ವ ಮತ್ತು ಲಂಡನ್ ನಲ್ಲಿ ಓರ್ವ ಮಹಿಳೆ ಸೇರಿದಂತೆ ಒಟ್ಟು ಆರು ಮಂದಿ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಕಳೆದ ಸುಮಾರು ತಿಂಗಳುಗಳಿಂದ ಈ ಆರು ಮಂದಿಯ ಚಲನವಲನಗಳ ಮೇಲೆ ನಿಗಾ ಇರಿಸಿದ್ದ ಭದ್ರತಾ ಅಧಿಕಾರಿಗಳು ನಿನ್ನೆ ಇವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭದ್ರತಾ ಅಧಿಕಾರಿಗಳು ಹಾಗೂ ಗುಪ್ತಚರ ಇಲಾಖೆಗಳು ನೀಡಿರುವ ಮಾಹಿತಿಗಳ ಪ್ರಕಾರ ಈ ಆರು ಮಂದಿ ಶಂಕಿತ ಉಗ್ರರು ಒಂದೇ ಉಗ್ರ ಸಂಘಟನೆ ಪರವಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಶಂಕೆ ವ್ಯಕ್ತಪಡಿಸಿವೆ.
ಅಂತೆಯೇ ಈ ಆರು ಮಂದಿ ವಾಸಿಸುತ್ತಿದ್ದ ಪ್ರದೇಶಗಳಿಗೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಗಳು ತೆರಳಿ ಶೋಧ ನಡೆಸಿದ್ದಾರೆ. ಈ ಶೋಧದ ಕುರಿತ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ.
ಬ್ರಿಟನ್ ನ ಭಯೋತ್ಪಾದನಾ ನಿಗ್ರಹ ಕಾಯ್ದೆಯ ಪ್ರಕಾರ ಪ್ರಸ್ತುತ ಭದ್ರತಾ ಅಧಿಕಾರಿಗಳು ವಶಕ್ಕೆ ಪಡೆದಿರುವ ಈ ಆರು ಮಂದಿಯ ವಿರುದ್ಧ 48 ಗಂಟೆಗಳಲ್ಲಿ ಚಾರರ್ಜ್ ಶೀಟ್ ದಾಖಲಿಸಬೇಕು. ಇಲ್ಲವೇ ವಾರಂಟ್ ಜಾರಿ ಮಾಡಿ ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು. ಹೀಗಾಗಿ ಈ ಎಲ್ಲ ಆರು ಮಂದಿ ಶಂಕಿತ ಉಗ್ರರ ವಿರುದ್ಧ ಬ್ರಿಟನ್ ಪೊಲೀಸರು ಕೈಗೊಳ್ಳವ ಕ್ರಮದ ಕುರಿತು ಇದೀಗ ಕುತೂಹಲ ಮೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


