ವಿದೇಶ

ಸೌದಿಗೆ ಶಸ್ತ್ರಾಸ್ತ್ರ ಪೂರೈಕೆ ಸ್ಥಗಿತಗೊಳಿಸಿದ ಅಮೆರಿಕ!

ಸೌದಿ ಅರೇಬಿಯಾಗೆ ಶಸ್ತ್ರಾಸ್ತ್ರ ಪೂರೈಕೆ ಮಾಡುವುದನ್ನು ಸ್ಥಗಿತಗೊಳಿಸಲು ಅಮೆರಿಕ ನಿರ್ಧರಿಸಿದೆ.

ಸೌದಿಗೆ ಶಸ್ತ್ರಾಸ್ತ್ರ ಪೂರೈಕೆ ಸ್ಥಗಿತಗೊಳಿಸಿದ ಅಮೆರಿಕ!
ಯೆಮೆನ್ ನಲ್ಲಿ ಹುತಿ ಬಂಡುಕೋರರ ವಿರುದ್ಧ ವೈಮಾನಿಕ ದಾಳಿ
Published On :
ವಾಷಿಂಗ್ ಟನ್: ಸೌದಿ ಅರೇಬಿಯಾಗೆ ಶಸ್ತ್ರಾಸ್ತ್ರ ಪೂರೈಕೆ ಮಾಡುವುದನ್ನು ಸ್ಥಗಿತಗೊಳಿಸಲು ಅಮೆರಿಕ ನಿರ್ಧರಿಸಿದೆ. ಯೆಮೆನ್ ನಲ್ಲಿ ಇರಾನ್ ಬೆಂಬಲಿತ ಹುತಿ ಬಂಡುಕೋರರ ವಿರುದ್ಧ ಯುದ್ಧ ಸಾರಿರುವ ಸೌದಿ ಅರೇಬಿಯಾದ ರಾಜಪ್ರಭುತ್ವದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಲು ಅಮೆರಿಕ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡದಿರಲು ನಿರ್ಧರಿಸಿದೆ. 
ಅಮೆರಿಕಾದ ಭದ್ರತಾ ಸಹಕಾರ ಸಹಿ ಮಾಡಲಾಗಿರುವ ಖಾಲಿ ಚೆಕ್ ಅಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದೇವೆ ಎಂದು ಅಮೆರಿಕದ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೌದಿಗೆ ಶಸ್ತ್ರಾಸ್ತ್ರಗಳ ಪೂರೈಕೆ ಸ್ಥಗಿತಗೊಳಿಸುವ ನಿರ್ಧಾರ ಹುತಿ ಬಂಡಾಯಕಾರರಿಗೆ ಹಿಂಸೆ ನೀಡುತ್ತಿರುವುದರ ಬಗೆಗಿನ ನಮ್ಮ ಕಾಳಜಿಯನ್ನು ತೋರುತ್ತದೆ ಎಂದು ಅಮೆರಿಕ ತಿಳಿಸಿದೆ.  
ನಿಖರವಾದ-ಮಾರ್ಗದರ್ಶನದ ಯುದ್ಧಸಾಮಗ್ರಿಗಳನ್ನು ಪೂರೈಕೆ ಮಾಡಲು ಉದ್ದೇಶಿಸಲಾಗಿತ್ತು, ಈಗಾಗಲೇ ಸೌದಿ ಅರೇಬಿಯಾ ಹಾಗೂ ಅಮೆರಿಕಾದ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದ್ದು, ಈಗ ಅಮೆರಿಕ ಸೌದಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡದಿರುವ ನಿರ್ಧಾರದಿಂದ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ.   
ಮೆರಿಕದ ಅವಳಿ ಕಟ್ಟಡಗಳ ಮೇಲೆ 2001, ಸೆಪ್ಟೆಂಬರ್ 11ರಂದು ನಡೆದ ಉಗ್ರಗಾಮಿ ದಾಳಿಗೆ ಸೌದಿ ಅರೇಬಿಯಾ ಕಾರಣ ಎಂದು ಅಮೆರಿಕ ಕಾಂಗ್ರೆಸ್ ಮಸೂದೆ ಅನುಮೋದಿಸಿದಾಗಿನಿಂದ ಉಭಯ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಸಂಬಂಧದ ಬಿಕ್ಕಟ್ಟು ಉಂಟಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.