ವಿದೇಶ

ಮೆಕ್ಸಿಕೋದ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 31 ಸಾವು, 70 ಜನರಿಗೆ ಗಾಯ

ಮೆಕ್ಸಿಕೋದ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ 31 ಜನರು ಸಾವನ್ನಪ್ಪಿ 70 ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಬುಧವಾರ ನಡೆದಿದೆ...

ಮೆಕ್ಸಿಕೋದ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 31 ಸಾವು, 70 ಜನರಿಗೆ ಗಾಯ
ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು
Published On :

ಮೆಕ್ಸಿಕೋ: ಮೆಕ್ಸಿಕೋದ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ 31 ಜನರು ಸಾವನ್ನಪ್ಪಿ 70 ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಬುಧವಾರ ನಡೆದಿದೆ.

ಮೆಕ್ಸಿಕೋ ನಗದರ ಟಲ್ಟ್ ಪೆಕ್ ನಗರದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ದುರ್ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೆ 24 ಮೃತ ದೇಹಗಳನ್ನು ಹೊರ ತೆಗೆಯಲಾಗಿದ್ದು, 31 ಮಂದಿ ಸಾವನ್ನಪ್ಪಿ, 70 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರತಿವರ್ಷದಂತೆ ಸಾಂಪ್ರದಾಯಿಕವಾಗಿ ಹೊಸ ವರ್ಷವನ್ನು ಪಟಾಕಿ ಸಿಡಿಸುವ ಮೂಲಕ ಮೆಕ್ಸಿಕೋ ಜನ ಸ್ವಾಗತಿಸುತ್ತಾರೆ, ವರ್ಷಾಂತ್ಯ ಆರಂಭವಾಗಿದ್ದು ಕ್ರಿಸ್ ಮಸ್, ಹೊಸ ವರ್ಷ ಹಾಗೂ ನ್ಯೂಯಾರ್ಕ್ ನಲ್ಲಿ ನಡೆಸಲಾಗುವ ಸರಣಿ ಪಾರ್ಟಿಗಳು ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ. ಪರಿಣಾಮ ಸ್ಥಳದಲ್ಲಿದ್ದ 31ಕ್ಕೂ ಹೆಚ್ಚು ಮಂದಿ ದುರ್ಮರಣವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಸ್ಫೋಟದ ತೀವ್ರತೆಗೆ ಮಾರುಕಟ್ಟೆ ಸಂಪೂರ್ಣವಾಗಿ ಭಸ್ಮವಾಗಿದ್ದು, ಕಾರ್ಖಾನೆಯಲ್ಲಿ ಇರಿಸಲಾಗಿದ್ದ ಪಟಾಕಿಗಳು ಸಂಪೂರ್ಣವಾಗಿ ಸ್ಫೋಟಗೊಂಡ ನಂತರ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆಂದು ನಾಗರಿಕ ರಕ್ಷಣೆ ಸೇವಾ ಮುಖ್ಯಸ್ಥ ಲೂಯಿಸ್ ಫೆಲಿಪ್ ಪ್ಲೆಂಟಿ ಅವರು ಹೇಳಿದ್ದಾರೆ.

ಗಾಯಗೊಂಡವರ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಹತ್ತಿರದಲ್ಲಿದ್ದ ಮನೆಗಳಲ್ಲಿ ಕಂಪನದ ಅನುಭವವಾಗಿದೆ. ಅಲ್ಲದೆ, ಸಮೀಪದಲ್ಲಿದ್ದ ವಾಹನಗಳು ನಾಶವಾಗಿವೆ ಎಂದು ತಿಳಿದುಬಂದಿದೆ.

ಪಟಾಕಿಗಳ ಸರಣಿ ಸ್ಫೋಟದಿಂದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಸ್ಥಳದಲ್ಲಿ ಇದೀಗ ಸೇನೆ ನಿಯೋಜನೆಗೊಂಡಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ. ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.