ವಿದೇಶ

ಭಾರತದೊಂದಿಗಿನ ಸಮಸ್ಯೆಗಳನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಲು ಪಾಕ್ ಸಿದ್ಧ: ನವಾಜ್ ಷರೀಫ್

ಭಾರತದೊಂದಿಗಿರುವ ಎಲ್ಲಾ ಸಮಸ್ಯೆಗಳನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಲು ಪಾಕಿಸ್ತಾನ ಸಿದ್ಧವಿದೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರು ಬುಧವಾರ...

ಭಾರತದೊಂದಿಗಿನ ಸಮಸ್ಯೆಗಳನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಲು ಪಾಕ್ ಸಿದ್ಧ: ನವಾಜ್ ಷರೀಫ್
ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ (ಸಂಗ್ರಹ ಚಿತ್ರ)
Published On :

ಇಸ್ಲಾಮಾಬಾದ್: ಭಾರತದೊಂದಿಗಿರುವ ಎಲ್ಲಾ ಸಮಸ್ಯೆಗಳನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಲು ಪಾಕಿಸ್ತಾನ ಸಿದ್ಧವಿದೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರು ಬುಧವಾರ ಹೇಳಿದ್ದಾರೆ.

ಮೂರು ದಿನಗಳ ಕಾಲ ಬೊಸ್ನಿಯಗೆ ಭೇಟಿ ನೀಡಿರುವ ಅವರು, ಭಯೋತ್ಪಾದನೆ ಕುರಿತಂತೆ ಮಾತನಾಡಿದ್ದಾರೆ. ಅಲ್ ಖೈದಾ ಮತ್ತು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ಉಗ್ರ ಸಂಘಟನೆಗಳ ಬೆದರಿಕೆಗಳನ್ನು ದೇಶ ಪರಿಣಾಮಕಾರಿಯಾಗಿ ಎದುರಿಸುತ್ತಿದ್ದು, ಪ್ರಸ್ತುತ ಪಾಕಿಸ್ತಾನದಲ್ಲಿ ಡೀಶ್ ಉಗ್ರ ಸಂಘಟನೆಯ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದೆ ಎಂದು ಹೇಳಿದ್ದಾರೆ.

ಭಯೋತ್ಪಾದನೆಗೆ ಪಾಕಿಸ್ತಾನ ಸಾಕಷ್ಟು ಬೆಲೆಯನ್ನು ತೆತ್ತಿದೆ. ಅಲ್ ಖೈದಾ ಹಾಗೂ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ಉಗ್ರ ಸಂಘಟನೆಗಳ ಅಡಗುತಾಣಗಳನ್ನು ನಾಶ ಮಾಡಿದ್ದೇವೆ. ಭಯೋತ್ಪಾದನೆಯ ಪಿಡುಗಿಗೆ ಅಂತ್ಯ ಹಾಡಲು ಪಾಕಿಸ್ತಾನ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.