ವಿದೇಶ

ಬಾಂಗ್ಲಾದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ: ಇಬ್ಬರು ಉಗ್ರರ ಸಾವು

ಉಗ್ರರ ಅಡಗುದಾಣಗಳ ಮೇಲೆ ಪೊಲೀಸರು ದಾಳಿ ನಡೆಸಿದಾಗ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಭಯೋತ್ಪಾದಕರು, ಓರ್ವ ಮಹಿಳೆ ಹಾಗೂ ಓರ್ವ ಬಾಲಕ ಆತ್ಮಾಹುತಿ ಸ್ಫೋಟ ನಡೆಸಿ ಸಾವನ್ನಪ್ಪಿದ್ದಾರೆ.

ಬಾಂಗ್ಲಾದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ: ಇಬ್ಬರು ಉಗ್ರರ ಸಾವು
ಬಾಂಗ್ಲಾದೇಶ
Published On :
ಢಾಕಾ: ಉಗ್ರರ ಅಡಗುದಾಣಗಳ ಮೇಲೆ ಪೊಲೀಸರು ದಾಳಿ ನಡೆಸಿದಾಗ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಭಯೋತ್ಪಾದಕರು, ಓರ್ವ ಮಹಿಳೆ ಹಾಗೂ ಓರ್ವ ಬಾಲಕ ಆತ್ಮಾಹುತಿ ಸ್ಫೋಟ ನಡೆಸಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. 
ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿರುವ ಮಹಿಳೆ ಮತ್ತು ಬಾಲಕ ಬಾಂಗ್ಲಾದೇಶದ ಜಮಾತ್-ಉಲ್- ಮುಜಾಹಿದ್ದೀನ್ ಉಗ್ರ ಸಂಘಟನೆಯವರು ಎಂದು ಬಾಂಗ್ಲಾ ಗೃಹ ಸಚಿವ ಅಸಾದುಝಮಾನ್ ಖಾನ್ ಹೇಳಿದ್ದಾರೆ. ದಾಳಿ ನಡೆಸಿದ ಪೊಲೀಸರು ಶರಣಾಗುವಂತೆ ಪದೇ ಪದೇ ಮನವಿ ಮಾಡಿದರೂ ಉಗ್ರರು ತಮ್ಮನ್ನು ತಾವು ಸ್ಫೋಟಿಸಿಕೊಂಡಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. 
ಬಾಂಬ್ ಆತ್ಮಾಹುತಿ ಸ್ಫೋಟದಲ್ಲಿ ಬಾಲಕಿಯೊಬ್ಬಳಿಗೆ ಗಾಯಗಳಾಗಿದೆ. ಇದಕ್ಕೂ ಮುನ್ನ ಢಾಕಾದಲ್ಲಿ ನಡೆದಿದ್ದ ದಾಳಿಯಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ನಾಲ್ವರು ಶರಣಾಗಿದ್ದರು. ಈ ಬೆನ್ನಲ್ಲೇ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.