ಪಾಕ್ ಜೈಲಿನಲ್ಲಿದ್ದ 220 ಮಂದಿ ಭಾರತೀಯ ಮೀನುಗಾರರ ಬಿಡುಗಡೆ!
ಸಮುದ್ರಗಡಿಯನ್ನು ದಾಟಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಬಂಧತರಾಗಿದ್ದ ಸುಮಾರು 220 ಮಂದಿ ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಸರ್ಕಾರ ಭಾನುವಾರ ಬಿಡುಗಡೆ ಮಾಡಿದೆ.

ಇಸ್ಲಾಮಾಬಾದ್: ಸಮುದ್ರಗಡಿಯನ್ನು ದಾಟಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಬಂಧತರಾಗಿದ್ದ ಸುಮಾರು 220 ಮಂದಿ ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಸರ್ಕಾರ ಭಾನುವಾರ ಬಿಡುಗಡೆ ಮಾಡಿದೆ.
ಪಠಾಣ್ ಕೋಟ್ ಉಗ್ರದಾಳಿ, ಉರಿ ಉಗ್ರ ದಾಳಿ ಬಳಿಕ ಉಭಯ ದೇಶಗಳ ನಡುವಿನ ಸಂಬಂಧ ತೀರಾ ಹಳಸಿತ್ತು. ಹೀಗಾಗಿ ಉಭಯ ದೇಶಗಳ ನಡುವಿನ ಸಂಬಂಧ ಉತ್ತಮಗೊಳಿಸುವ ಪ್ರಯತ್ನವಾಗಿ ಪಾಕಿಸ್ತಾನ ಸರ್ಕಾರ ವಿವಿಧ ಜೈಲುಗಳಲ್ಲಿದ್ದ ಸುಮಾರು 220 ಮಂದಿ ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ. ಇನ್ನು ಭಾರತದಲ್ಲಿಯೂ ಪಾಕಿಸ್ತಾನದ ಸುಮಾರು ಮೀನುಗಾರರನ್ನು ಬಂಧಿಸಲಾಗಿದ್ದು, ಪಾಕ್ ಸರ್ಕಾರದ ಕ್ರಮದ ಬಳಿಕ ಭಾರತ ಕೂಡ ತನ್ನ ವಶದಲ್ಲಿರುವ ಮೀನುಗಾರರನ್ನು ಬಿಡುಗಡೆಗೊಳಿಸುವ ಸಾಧ್ಯತೆ ಇದೆ.
ಡಿಸೆಂಬರ್ 25 ಪಾಕಿಸ್ತಾನದ ಮಟ್ಟಿಗೆ ವಿಶೇಷವಾಗಿದ್ದು, ಇಂದು ಕ್ರಿಸ್ ಮಸ್ ಹಾಗೂ ಪಾಕಿಸ್ತಾನದ ರಾಷ್ಟ್ರಪಿತಾ ಮಹಮದ್ ಅಲಿ ಜಿನ್ನಾ ಅವರ ಜನ್ಮದಿನವಾಗಿದೆ. ವಿಶೇಷವೆಂದರೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರ ಜನ್ಮದಿನ ಕೂಡ ಇಂದೇ. ಹೀಗಾಗಿ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್ ನಲ್ಲಿ ನವಾಜ್ ಷರೀಫ್ ಅವರಿಗೆ ಶುಭಾಶಯ ಕೋರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


