ಚಿಲಿಯಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 7.6ರಷ್ಟು ತೀವ್ರತೆ ದಾಖಲು
ದಕ್ಷಿಣ ಚಿಲಿಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.6ರಷ್ಟು ತೀವ್ರತೆ ದಾಖಲಾಗಿದೆ.

ಸ್ಯಾಂಟಿಯಾಗೋ: ದಕ್ಷಿಣ ಚಿಲಿಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.6ರಷ್ಟು ತೀವ್ರತೆ ದಾಖಲಾಗಿದೆ.
ದಕ್ಷಿಣ ಚಿಲಿಯ ಕ್ವೆಲಾನ್ ಪ್ರಾಂತ್ಯದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, ಚಿಲಿಯ ಹಲವು ಕರಾವಳಿ ತೀರ ಪ್ರದೇಶದಲ್ಲಿ ಹವಾಮಾನ ಇಲಾಖೆ ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ. ಆದರೆ ಈ ವರೆಗೂ ಭೂಕಂಪನದಿಂದ ಸಾವು-ನೋವಾದ ಕುರಿತು ವರದಿಗಳಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಚಿಲಿಯ ಕರಾವಳಿ ತೀರ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಮುಚ್ಚಲಾಗಿದ್ದು, ಕರಾವಳಿ ತೀರ ಪ್ರದೇಶದಲ್ಲಿರುವ ಲಕ್ಷಾಂತರ ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಲಾಗುತ್ತಿದೆ.
ಪ್ರಬಲ ಭೂಕಂಪನದಿಂದ ಚಿಲಿಯ ಪ್ರಮುಖ ವಿದ್ಯುತ್ ಘಟಕಕ್ಕೆ ಹಾನಿಯಾಗಿದ್ದು ಕರಾವಳಿ ತೀರದ ಸುಮಾರು 21 ಸಾವಿರ ಮನೆಗಳು ಇದೀಗ ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ. ಚಿಲಿಯ ಹವಾಮಾನ ಇಲಾಖೆ ಸಮುದ್ರದಲ್ಲಿನ ಬೆಳವಣಿಗೆಗಳನ್ನು ಪರಿಶೀಲಿಸುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕರಾವಳಿ ತೀರದಲ್ಲಿ ಸುಮಾರು 40 ಸಾವಿರಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಭೂಕಂಪನ ಸಂಭವಿಸಿರುವ ಕ್ವೆಲಾನ್ ಪ್ರದೇಶ ಪ್ರವಾಸಿ ತಾಣವಾಗಿದ್ದು, ಇಲ್ಲಿ ಹಲವಾರು ಸುಂದರ ದ್ವೀಪಗಳಿವೆ. ಹೀಗಾಗಿ ಪ್ರತಿನಿತ್ಯ ಇಲ್ಲಿಗೆ ಸಾವಿರಾರು ಮಂದಿ ಪ್ರವಾಸಿಗರು ಆಗಮಿಸುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


