ವಿದೇಶ

ರಷ್ಯಾ ವಿರುದ್ಧ ನಿರ್ಬಂಧ ಹೇರಲು ಒಬಾಮ ಆಡಳಿತದ ಚಿಂತನೆ

2016 ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿದ ಆರೋಪ ಎದುರಿಸುತ್ತಿರುವ ರಷ್ಯಾ ವಿರುದ್ಧ ನಿರ್ಬಂಧ ಹೇರಲು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಆಡಳಿತ ಚಿಂತನೆ ನಡೆಸಿದೆ.

ರಷ್ಯಾ ವಿರುದ್ಧ ನಿರ್ಬಂಧ ಹೇರಲು ಒಬಾಮ ಆಡಳಿತದ ಚಿಂತನೆ
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ
Published On :
ವಾಷಿಂಗ್ ಟನ್: 2016 ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿದ ಆರೋಪ ಎದುರಿಸುತ್ತಿರುವ ರಷ್ಯಾ ವಿರುದ್ಧ ನಿರ್ಬಂಧ ಹೇರಲು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಆಡಳಿತ ಚಿಂತನೆ ನಡೆಸಿದೆ. 
ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿದ್ದ ಹಿಲರಿ ಕ್ಲಿಂಟನ್ ಇ-ಮೇಲ್ ಹ್ಯಾಕ್ ಮಾಡಿ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುವ ಮೂಲಕ ರಷ್ಯಾ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಗೆಲುವಿಗೆ ಸಹಕಾರ ನೀಡಿತ್ತು ಎಂಬ ಆರೋಪ ಇತ್ತೀಚೆಗೆ ವ್ಯಾಪಕವಾಗಿ ಕೇಳಿಬಂದಿತ್ತು. 
ಸಿಬಿಎಸ್ ನ್ಯೂಸ್ ಹಾಗೂ ಸಿಎನ್ಎನ್ ವರದಿಯ ಪ್ರಕಾರ ರಷ್ಯಾ ಗುಪ್ತಚರ ಇಲಾಖೆ ಹಾಗೂ ಅಲ್ಲಿನ ಅಧಿಕಾರಿಗಳನ್ನು ಗುರಿಯಾಗಿರಿಸಿಕೊಂಡು ಅಮೆರಿಕ ರಷ್ಯಾ ವಿರುದ್ಧ ನಿರ್ಬಂಧ ಹೇರುವ ಆಯ್ಕೆಯನ್ನು ಪರಿಗಣಿಸಿದೆ ಎಂದು ತಿಳಿದುಬಂದಿದೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬೆಂಬಲದಿಂದ ರಷ್ಯಾದ ಗುಪ್ತಚರ ಇಲಾಖೆ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿಯಾಗಿದ್ದ ಹಿಲರಿ ಕ್ಲಿಂಟನ್ ಇ-ಮೇಲ್ ಗಳನ್ನುಹ್ಯಾಕ್ ಮಾಡುವ ಮೂಲಕ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿದೆ ಎಂದು ಅಮೆರಿಕದ ಗುಪ್ತಚರ ಇಲಾಖೆ ಸಿಐಎ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.