ಎನ್ಎಸ್ ಜಿ ಸದಸ್ಯತ್ವ ಕರಡು ನೀತಿ ತಿದ್ದುಪಡಿಗೆ ಪಾಕಿಸ್ತಾನದ ವಿರೋಧ
ಅಮೆರಿಕದ ಶಸ್ತ್ರಾಸ್ತ್ರ ನಿಯಂತ್ರ ಪ್ರಾಧಿಕಾರ (ಎಸಿಎ)ದ ಅಧಿಕಾರಿಗಳು ಅಭಿಪ್ರಾಯಪಟ್ಟಿರುವಂತೆ ಎನ್ ಎಸ್ ಜಿ ಒಕ್ಕೂಟದ ಕರಡು ನೀತಿಯಲ್ಲಿ ತಿದ್ದುಪಡಿ ತರಲಾಗಿರುವುದನ್ನು ಪಾಕಿಸ್ತಾನ ವಿರೋಧಿಸಿದೆ.

Published On :
ಇಸ್ಲಾಮಾಬಾದ್: ಅಮೆರಿಕದ ಶಸ್ತ್ರಾಸ್ತ್ರ ನಿಯಂತ್ರ ಪ್ರಾಧಿಕಾರ (ಎಸಿಎ)ದ ಅಧಿಕಾರಿಗಳು ಅಭಿಪ್ರಾಯಪಟ್ಟಿರುವಂತೆ ಎನ್ ಎಸ್ ಜಿ ಒಕ್ಕೂಟದ ಕರಡು ನೀತಿಯಲ್ಲಿ ತಿದ್ದುಪಡಿ ತರಲಾಗಿರುವುದನ್ನು ಪಾಕಿಸ್ತಾನ ವಿರೋಧಿಸಿದೆ.
ಕರಡು ನೀತಿಯ ತಿದ್ದುಪಡಿ ತಾರತಮ್ಯದಿಂದ ಕೂಡಿದ್ದು ಸಹಕಾರಿಯಾಗಿಲ್ಲ ಎಂದು ಪಾಕಿಸ್ತಾನ ಆಕ್ಷೇಪ ವ್ಯಕ್ತಪಡಿಸಿದೆ. ತಿದ್ದುಪಡಿಯ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಇಲಾಖೆಯ ವಕ್ತಾರ ನಫೀಜ್ ಜಕಾರಿಯಾ, ಎನ್ಎಸ್ ಜಿ ಕರಡು ನೀತಿ ತಿದ್ದುಪಡಿ ತಾರತಮ್ಯ ಎಸಗುತ್ತಿರುವುದು ಸ್ಪಷ್ಟವಾಗಿದ್ದು ಇದು ಯಾವುದೇ ರೀತಿಯಲ್ಲೂ ಸಹಕಾರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಮೆರಿಕದ ಶಸ್ತ್ರಾಸ್ತ್ರ ನಿಯಂತ್ರ ಪ್ರಾಧಿಕಾರ (ಎಸಿಎ)ದ ಅಧಿಕಾರಿಗಳು ಅಭಿಪ್ರಾಯಪಟ್ಟಿರುವಂತೆ ಎನ್ ಎಸ್ ಜಿ ಒಕ್ಕೂಟದ ಕರಡು ನೀತಿಯಲ್ಲಿ ತಿದ್ದುಪಡಿ ತರಲಾಗಿದ್ದು, ನೂತನ ಕರಡು ನೀತಿಯ ಅನ್ವಯ ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ಪಡೆಯುವ ಎಲ್ಲ ಅರ್ಹತೆ ಇದೆ ಎಂದು ಹೇಳಿದೆ. ಎನ್ ಎಸ್ ಜಿ ಒಕ್ಕೂಟದ ಮಾಜಿ ಅಧ್ಯಕ್ಷ ರಾಫೆಲ್ ಮರಿಯಾನೋಗ್ರಾಸಿ ಸಿದ್ಧಪಡಿಸಿರುವ ಹೊಸ ನೀತಿಯ ಪ್ರಕಾರ ಎನ್ ಎಸ್ ಜಿ ಸದಸ್ಯ ಬಯಸುವ ರಾಷ್ಟ್ರ ಬೇರೊಂದು ಸದಸ್ಯವಲ್ಲದ ರಾಷ್ಟ್ರಕ್ಕೆ ಸದಸ್ಯತ್ವ ಸಿಗದಂತೆ ತಡೆ ಒಡ್ಡಿದರೆ ಆ ರಾಷ್ಟ್ರ ಎನ್ ಎಸ್ ಜಿ ಸದಸ್ಯತ್ವ ಪಡೆಯುವ ಅರ್ಹತೆ ಕಳೆದುಕೊಳ್ಳುತ್ತದೆ ಎಂಬ ಗಂಭೀರ ಎಚ್ಚರಿಕೆಯನ್ನು ನೀಡಿದ್ದಾರೆ. ಭಾರತದ ಸೇರ್ಪಡೆಗೆ ನಿರಂತರವಾಗಿ ವಿರೋಧ ವ್ಯಕ್ತಪಡಿಸುತ್ತಿರುವ ಪಾಕಿಸ್ತಾನ ಈಗ ಹೊಸ ನೀತಿಗಳಿಗೆ ವಿರೋಧ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


