ವಿಶ್ವಸಂಸ್ಥೆಯಿಂದ ಮಸೂದ್ ನಿಷೇಧಕ್ಕೆ ಮತ್ತೆ ಚೀನಾ ಅಡ್ಡಗಾಲು: ಭಾರತ ಕೆಂಡಾಮಂಡಲ
ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಗೆ ವಿಶ್ವಸಂಸ್ಥೆಯಿಂದ ನಿಷೇಧ ವಿಧಿಸುವ ವಿಷಯವಾಗಿ ಚೀನಾ ಮತ್ತೊಮ್ಮೆ ಅಡ್ಡಗಾಲು ಹಾಕಿದ್ದು ಭಾರತದ ಕೆಂಗಣ್ಣಿಗೆ ಗುರಿಯಾಗಿದೆ.

Published On :
ನವದೆಹಲಿ: ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಗೆ ವಿಶ್ವಸಂಸ್ಥೆಯಿಂದ ನಿಷೇಧ ವಿಧಿಸುವ ವಿಷಯವಾಗಿ ಚೀನಾ ಮತ್ತೊಮ್ಮೆ ಅಡ್ಡಗಾಲು ಹಾಕಿದ್ದು ಭಾರತದ ಕೆಂಗಣ್ಣಿಗೆ ಗುರಿಯಾಗಿದೆ.
ಚೀನಾದ ನಡೆಯನ್ನು ಭಾರತದ ವಿದೇಶಾಂಗ ಸಚಿವಾಲಯ ದುರದೃಷ್ಟಕರ ಎಂದು ಹೇಳಿದ್ದು, ಚೀನಾ ಸ್ವತಃ ಭಯೋತ್ಪಾದನೆಯ ಸಮಸ್ಯೆ ಎದುರಿಸುತ್ತಿದೆ. ಅಷ್ಟೇ ಅಲ್ಲದೇ ಎಲ್ಲಾ ರೀತಿಯ ಭಯೋತ್ಪಾದನೆಗೂ ವಿರೋಧ ವ್ಯಕ್ತಪಡಿಸಿತ್ತು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ.
ಚೀನಾ ವಿರೋಧದ ಪರಿಣಾಮವಾಗಿ ಮಸೂದ್ ಅಜರ್ ನ್ನು ನಿಷೇಧಿತ ಉಗ್ರರ ಪಟ್ಟಿಗೆ ಸೇರಿಸುವ ಪ್ರಕ್ರಿಯೆ ಮತ್ತೊಮ್ಮೆ ವಿಫಲವಾಗಿದೆ. ಮಸೂದ್ ಅಜರ್ ಹಾಗೂ ಆತನ ಉಗ್ರ ಸಂಘಟನೆಯನ್ನು ನಿಷೇಧಿತ ಉಗ್ರ ಸಂಘನೆ ಪಟ್ಟಿಗೆ ಸೇರಿಸಲು ಅಂತಾರಾಷ್ಟ್ರೀಯ ಸಮುದಾಯದ ಅಸಾಮರ್ಥ್ಯ ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿನ ದ್ವಿಮುಖ ನೀತಿಯನ್ನು ತೋರುತ್ತದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಹೇಳಿದೆ. ಮಸೂದ್ ಅಜರ್ ಗೆ ನಿಷೇಧ ವಿಧಿಸುವ ವಿಷಯವಾಗಿ ಭಾರತದ ನಿರಂತರ ಮನವಿಯ ಹೊರತಾಗಿಯೂ ಚೀನಾ ಮೂರನೇ ಬಾರಿಗೆ ಭಾರತದ ಯತ್ನಕ್ಕೆ ಅಡ್ಡಿ ಉಂಟುಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


