ಬುರುಂಡಿಯಲ್ಲಿ ಗ್ರೆನೇಡ್ ದಾಳಿ; 26 ಮಂದಿಗೆ ಗಾಯ
ಅಫ್ರಿಕಾ ಖಂಡದ ಬುರುಂಡಿಯಲ್ಲಿ ಪ್ರತ್ಯೇಕತಾವಾದಿಗಳು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 26 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ...

ಬುಜುಂಬುರಾ: ಅಫ್ರಿಕಾ ಖಂಡದ ಬುರುಂಡಿಯಲ್ಲಿ ಪ್ರತ್ಯೇಕತಾವಾದಿಗಳು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 26 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬುರುಂಡಿಯ ಬುಜುಂಬುರಾದಲ್ಲಿ ಈ ದಾಳಿ ನಡೆಸಲಾಗಿದ್ದು, 26 ಮಂದಿಯ ಪೈಕಿ 9 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಬುರುಂಡಿಯನ್ ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಜನವಸತಿ ಪ್ರದೇಶದ ಮೇಲೆ ಗ್ರೆನೇಡ್ ಗಳನ್ನು ಎಸೆದ ಪರಿಣಾಮ 26 ಮಂದಿ ಗಾಯಗೊಂಡಿದ್ದಾರೆ.
ಇದಕ್ಕೂ ಮೊದಲು ಗುರುವಾರ ಕಾರ್ಯಾಚರಣೆ ನಡೆಸಿದ್ದ ಭದ್ರತಾ ಸಿಬ್ಬಂದಿಗಳು ಮಟಕುರಾದಲ್ಲಿರುವ ಉಗ್ರರ ಅಡಗುದಾಣ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಎಕೆ 47 ಸರಣಿಯ ಬಂದೂಕುಗಳು, 2 ಬಾಂಬ್ ಗಳು ಮತ್ತು ಹಲವು ಬುಲೆಟ್ ಮ್ಯಾಗಜಿನ್ ಗಳನ್ನು ವಶಪಡಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಉಗ್ರರು ದಾಳಿ ನಡೆಸಿದ್ದಾರೆ.
ಬುರುಂಡಿಯನ್ ಅಧ್ಯಕ್ಷ ಪಿಯರೆ ಕುರುಂಜಿಜಾ ಅವರ ಮೂರನೇ ಬಾರಿಯ ಅಧಿಕಾರ ಸ್ವೀಕಾರಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. 2015ರ ಏಪ್ರಿಲ್ ನಿಂದಲೂ ಇದೇ ವಿಚಾರವಾಗಿ ಬುರುಂಡಿಯಲ್ಲಿ ಹಲವು ಹಿಸಾಂತ್ಮಕ ಪ್ರತಿಭಟನೆಗಳು ನಡೆಯುತ್ತಿದ್ದು, ಇದಕ್ಕೆ ಸ್ಥಳೀಯ ಪ್ರತ್ಯೇಕತಾವಾದಿಗಳು ಕೂಡ ಕೈಜೋಡಿಸಿದ್ದಾರೆ. 2015 ಜುಲೈ ತಿಂಗಳಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆ ವಿವಾದಕ್ಕೆ ಕಾರಣವಾಗಿತ್ತು. ಆ ಬಳಿಕ ಹಿಂಸಾಚಾರ ಘಟನೆಯಲ್ಲಿ ಈವರೆಗೂ ಸುಮಾರು 400 ಮಂದಿ ಸಾವನ್ನಪ್ಪಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


